ಹೂಟಗಿ ಬಳಿ ಹುಬ್ಬಳ್ಳಿ-ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರೀ ದರೋಡೆ
ಮಹಾರಾಷ್ಟ್ರದ ಹೂಟಗಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ - ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು...
ಸೋಲಾಪುರ: ಮಹಾರಾಷ್ಟ್ರದ ಹೂಟಗಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ - ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು ಬೆದರಿಸಿ, ಅವರಿಂದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.
ಸುಮಾರು 15 ರಿಂದ 20 ಮಂದಿ ದರೋಡೆಕೋರರ ತಂಡ ಈ ಕೃತ್ಯ ವೆಸಗಿದ್ದು, ಎಸ್ 1 ಬೋಗಿಯಿಂದ ಎಸ್ 6 ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು ಬೆದರಿಸಿ ಹಣ, ಆಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡವರ ಪೈಕಿ ಹಲವರು ಕಲಬುರಗಿಯವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ರೈಲ್ವೇ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.