ಮೃತ ನಿವೃತ್ತ ಯೋಧನ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ ಒಂದು ಕೋಟಿ ರೂ ಪರಿಹಾರ
ಒ ಆರ್ ಒ ಪಿ ಜಾರಿ ವಿಳಂಬವಾಗುತ್ತಿರುವುದನ್ನು ಪ್ರತಿಭಟಿಸಿ ಆತ್ಮಹತ್ಯೆಗೆ ಮೊರೆ ಹೋದ ಮಾಜಿ ಸೈನಿಕ ರಾಮ್ ಕಿಶನ್ ಗ್ರೆವಾಲ್ ಕುಟುಂಬಕ್ಕೆ ಗುರುವಾರ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ ಪರಿಹಾರ
ಭಿವಾನಿ: ಒ ಆರ್ ಒ ಪಿ ಜಾರಿ ವಿಳಂಬವಾಗುತ್ತಿರುವುದನ್ನು ಪ್ರತಿಭಟಿಸಿ ಆತ್ಮಹತ್ಯೆಗೆ ಮೊರೆ ಹೋದ ಮಾಜಿ ಸೈನಿಕ ರಾಮ್ ಕಿಶನ್ ಗ್ರೆವಾಲ್ ಕುಟುಂಬಕ್ಕೆ ಗುರುವಾರ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ ಪರಿಹಾರ ಘೋಷಿಸಿದ್ದಾರೆ.
ರಾಮ್ ಕಿಶನ್ ಗ್ರೆವಾಲ್ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಮಾಜಿ ಸೈನಿಕನ ಪುತ್ರ ಜಸ್ವಂತ್ ಮತ್ತು ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಜನರ ಎದುರು ಈ ಘೋಷಣೆ ಮಾಡಿದ್ದಾರೆ.
ನೆನ್ನೆ ರಾಮ್ ಕಿಶನ್ ಗ್ರೆವಾಲ್ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾಗ ದೆಹಲಿ ಪೊಲೀಸರು ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿದ್ದರು. ಇದು ಭಾರಿ ವಿರೋಧಕ್ಕೆ ಕಾರಣವಾಗಿತ್ತು.