ಜಯಲಲಿತಾ 
ಪ್ರಧಾನ ಸುದ್ದಿ

ಜಯಲಲಿತಾ ಸಂಪೂರ್ಣ ಗುಣಮುಖ, ಶೀಘ್ರ ಡಿಸ್ಚಾರ್ಜ್: ಅಪೋಲೋ ಆಸ್ಪತ್ರೆ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...

ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ಪ್ರತಾಪ್ ಸಿ. ರೆಡ್ಡಿ ಅವರು ಶುಕ್ರವಾರ ತಿಳಿಸಿದ್ದಾರೆ.
ಈಗ ತಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದು ಜಯಲಲಿತಾ ಅವರ ಗಮನಕ್ಕೆ ಬರುತ್ತಿದೆ. ಮುಖ್ಯಮಂತ್ರಿಗಳು ಸಂಪೂರ್ಣ ಗುಣಮುಖರಾಗಿದ್ದು, ಆರೋಗ್ಯದ ಬೆಳವಣಿಗೆ ಬಗ್ಗೆ ಮತ್ತು ವೈದ್ಯರ ಚಿಕಿತ್ಸೆಯ ಬಗ್ಗೆ ಅವರಿಗೆ ತುಂಬಾ ಖುಷಿ ಇದೆ ಎಂದು ರೆಡ್ಡಿ ಹೇಳಿದ್ದಾರೆ.
ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ಕೆಲಸಕ್ಕೆ ಮರಳಲು ತುಂಬಾ ಉತ್ಸುಕರಾಗಿದ್ದಾರೆ. ಅವರ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದರು. ಇದೇ ವೇಳೆ ಅವರ ಡಿಸ್ಚಾರ್ಜ್ ದಿನಾಂಕದ ಬಗ್ಗೆ ಪ್ರತಿಕ್ರಿಯಿಸದ ರೆಡ್ಡಿ, ಗಂಭೀರ ಸ್ವರೂಪದ ಚಿಕಿತ್ಸೆ ಮುಗಿದಿದೆ. ಡಿಸ್ಚಾರ್ಜ್ ಬಗ್ಗೆ ಮುಖ್ಯಮಂತ್ರಿಗಳೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ಇಂದು ಬೆಳಗ್ಗೆಯಷ್ಟೇ ಜಯಲಲಿತಾ ಅವರನ್ನು ಶೀಘ್ರದಲ್ಲೇ ತೀವ್ರ ನಿಗಾ ಘಟಕ(ಸಿಸಿಯು)ದಿಂದ ಖಾಸಗಿ ಕೊಠಡಿಗೆ ಸ್ಥಳಾಂತರಿಸಲಾಗುತ್ತದೆ ಎಂದು ಎಐಎಡಿಎಂಕೆ ಹಿರಿಯ ನಾಯಕರೊಬ್ಬರು ಹೇಳಿದ್ದರು. 
ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅಂದಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!