ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಶೀಘ್ರದಲ್ಲೇ ತೀವ್ರ ನಿಗಾ ಘಟಕ(ಸಿಸಿಯು)ದಿಂದ ಖಾಸಗಿ ಕೊಠಡಿಗೆ ಸ್ಥಳಾಂತರಿಸಲಾಗುತ್ತದೆ ಎಂದು ಎಐಎಡಿಎಂಕೆ ಹಿರಿಯ ನಾಯಕರೊಬ್ಬರು ಶುಕ್ರವಾರ ತಿಳಿಸಿದ್ದಾರೆ.
"ಶ್ವಾಸಕೋಶದ ಸೋಂಕು ನಿಯಂತ್ರಣದಲ್ಲಿದೆ. ಅವರು ಗಂಭೀರ ಸ್ವರೂಪದಿಂದ ಹೊರಬಂದಿದ್ದಾರೆ. ಉಸಿರಾಟದ ಸಮಸ್ಯೆಯೂ ಕಡಿಮೆಯಾಗಿದೆ. ಹೀಗಾಗಿ ಕೃತಕ ಉಸಿರಾಟವನ್ನು ಹಾಗಾಗ ತೆಗೆಯಲಾಗುತ್ತದೆ ಎಂದು ಎಐಎಡಿಎಂಕೆ ಹಿರಿಯ ನಾಯಕ ಹಾಗೂ ವಕ್ತಾರ ಸಿ ಪೊನ್ನೈಯನ್ ಅವರು ಹೇಳಿರುವುದಾಗಿ ಐಎಎನ್ ಎಸ್ ವರದಿ ಮಾಡಿದೆ.
ಕಳೆದ ಒಂದು ವಾರದಿಂದ ಜಯಲಲಿತಾ ಅವರು ಸ್ಪಲ್ಪ ಪ್ರಮಾಣದ ಗಟ್ಟಿ ಆಹಾರವನ್ನು ಸೇವಿಸುತ್ತಿದ್ದಾರೆ ಮತ್ತು ಜನರೊಂದಿಗೆ ಮಾತನಾಡುತ್ತಿದ್ದಾರೆ ಎಂದು ಪೊನ್ನೈಯನ್ ತಿಳಿಸಿದ್ದಾರೆ.
ಕಳೆದ ಸೆಪ್ಟೆಂಬರ್ 22ರಂದು ಜಯಲಲಿತಾ ಅವರು ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದು, ಅಂದಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics