ಜಯಲಲಿತಾ 
ಪ್ರಧಾನ ಸುದ್ದಿ

ಬಿ-ಫಾರ್ಮ್ ಗೆ ಜಯಾ ಹೆಬ್ಬೆಟ್ಟು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...

ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬಿ-ಫಾರ್ಮ್ ಗಳಿಗೆ ಹೆಬ್ಬೆಟ್ಟು ಒತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಚುನಾವಣಾ ಪತ್ರಗಳಿಗೆ ಹೆಬ್ಬೆಟ್ಟು ಒತ್ತುವುದು ಕಾನೂನು ಬಾಹಿರ ಮತ್ತು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಘೋಷಿಸುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಬಿ-ಫಾರ್ಮ್ ಗಳ ದೃಢಿಕರಣದ ಕುರಿತು ಚುನಾವಣಾ ಆಯೋಗ ಪರಿಶೀಲಿಸಲಿದೆ ಎಂದು ಹೇಳಿದೆ.
ಹೆಬ್ಬೆಟ್ಟು ಒತ್ತುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ರಾಮಸ್ವಾಮಿ ಅವರು ತಮ್ಮ ಅರ್ಜಿಯಲ್ಲಿ ವಾದಿಸಿದ್ದರು. 
ತಮಿಳುನಾಡಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.19ರಂದು ಚುನಾವಣೆ ನಡೆಯುತ್ತಿದ್ದು, ಎಐಎಡಿಎಂಕೆ ಅಭ್ಯರ್ಥಿಗಳಿಗೆ ಜಯಲಲಿತಾ ಅವರು ಸಹಿ ಮಾಡುವ ಬದಲು ಹೆಬ್ಬೆಟ್ಟು ಒತ್ತಿ ಬಿ-ಫಾರ್ಮ್ ಗಳನ್ನು ವಿತರಿಸಲಾಗಿದೆ.
ಅನಾರೋಗ್ಯಪೀಡಿತರಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರಿಗೆ ಕೃತಕ ಉಸಿರಾಟದ ನಳಿಕೆ ಅಳವಡಿಸಿರುವುದರಿಂದ ಅವರು ಸಹಿ ಮಾಡುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಅಭ್ಯರ್ಥಿಗಳ ಬಿ-ಫಾರ್ಮ್ಗೆ ಹೆಬ್ಬೆಟ್ಟು ಒತ್ತಿದ್ದಾರೆ.
ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸುವವರು ಅರ್ಜಿ ತುಂಬಿ, ಪಕ್ಷದ ಮುಖ್ಯಸ್ಥರಿಂದ ಸಹಿ ಮಾಡಿಸಬೇಕು ಎಂದು ಚುನಾವಣಾ ಆಯೋಗದ ನಿಯಮ ಹೇಳುತ್ತದೆ. ನಕಲು ಸಹಿ ಅಥವಾ ರಬ್ಬರ್‌ ಸ್ಟಾಂಪ್‌ಗೆ ಅವಕಾಶವಿರುವುದಿಲ್ಲ. ಹೀಗಾಗಿ ಜಯಾ ಅವರು ತಮ್ಮ ಎಡಗೈ ಹೆಬ್ಬೆಟ್ಟು ಒತ್ತಿ ಬಿ-ಫಾರ್ಮ್ ವಿತರಿಸಿದ್ದಾರೆ. 
ಕೃತಕ ಉಸಿರಾಟ ವ್ಯವಸ್ಥೆಯಿಂದಾಗಿ ಜಯಾ ಅವರ ಬಲಗೈ ಊದಿಕೊಂಡಿರುವುದರಿಂದ ಅವರು ಸಹಿ ಮಾಡುವ ಸ್ಥಿತಿಯಲ್ಲಿಲ್ಲ. ಹೀಗಾಗಿ ತಮ್ಮ ಎದುರೇ ಅವರು ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಮದ್ರಾಸ್‌ ವೈದ್ಯ ಕಾಲೇಜಿನ ಡಾ| ಪಿ. ಬಾಲಾಜಿ ಅವರು ಅ.27ರಂದು ಪ್ರಮಾಣಿಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!