ಜಯಲಲಿತಾ 
ಪ್ರಧಾನ ಸುದ್ದಿ

ಜಯಲಲಿತಾ ಸಂಪೂರ್ಣ ಗುಣಮುಖ, ಡಿಸ್ಚಾರ್ಜ್ ದಿನಾಂಕ ಇನ್ನೂ ನಿಗದಿ ಮಾಡಿಲ್ಲ: ಆಸ್ಪತ್ರೆ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ...

ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಡಿಸ್ಚಾರ್ಜ್ ಮಾಡುವ ದಿನಾಂಕ ಇನ್ನೂ ನಿಗದಿ ಮಾಡಿಲ್ಲ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ಪ್ರತಾಪ್ ಸಿ. ರೆಡ್ಡಿ ಅವರು ಶನಿವಾರ ಹೇಳಿದ್ದಾರೆ.
ಇಂದು ವರದಿಗಾರರೊಂದಿಗೆ ಮಾತನಾಡಿದ ರೆಡ್ಡಿ ಅವರು, ನಾನು ಈಗಾಗಲೇ ಹೇಳಿದಂತೆ ಅವರ ಸೋಂಕು ಸಂಪೂರ್ಣ ನಿಯಂತ್ರಣದಲ್ಲಿ. ಆದರೆ ಅವರು ಇನ್ನಷ್ಟು ಪುನಶ್ಚೇತನಗೊಳ್ಳುವ ಅಗತ್ಯ ಇದೆ. ಹೀಗಾಗಿ ಮುಖ್ಯಮಂತ್ರಿಯವರ ಆರೋಗ್ಯದಲ್ಲಿನ ಬೆಳವಣಿಗೆಯನ್ನು ಆಧರಿಸಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಪಕ್ಷದ ಹಿರಿಯ ಮುಖಂಡ ಪೊನ್ನಯ್ಯನ್‌ ಅವರು, ಜಯಲಲಿತಾ ಅವರು ಮನೆಗೆ ಹೋದರೆ ಮನೆಯಲ್ಲಿ ಸುಮ್ಮನೇ ಕೂರುವವರಲ್ಲ. ಅದೂ ಇದೂ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಅದರಿಂದ ಅವರಿಗೆ ಆಯಾಸವಾಗಬಹುದು. ಹೀಗಾಗಿ ಅವರು ಇನ್ನೂ ಕೆಲ ಸಮಯ ಆಸ್ಪತ್ರೆಯಲ್ಲೇ ಇರಲಿ ಎಂದು ಹೇಳಿದ್ದಾರೆ.
ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅಂದಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!