ಹೊಸ 2000 ನೋಟ್ (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ನೋಟ್ ನಿಷೇಧ: ಹೆದ್ದಾರಿಗಳಲ್ಲಿ ಟೋಲ್ ರದ್ದು ನ.18ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 14ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ...

ನವದೆಹಲಿ: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 14ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಇದೀಗ ಅದನ್ನು ನವೆಂಬರ್ 18ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. 
ಸುಗಮ ಸಂಚಾರಕ್ಕಾಗಿ ನವೆಂಬರ್ 14ರವರೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಲಾಗಿತ್ತು. ಆದರೆ ಬ್ಯಾಂಕ್ ಗಳಿಂದ ಹಣ ವಿನಿಮಯ ಮಾಡಿಕೊಳ್ಳಲು ಮತ್ತು ಎಟಿಎಂನಿಂದ ನಗದು ಪಡೆಯಲು ಜನ ಇನ್ನೂ ಪರದಾಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನವೆಂಬರ್ 18ರವರೆಗೆ ವಿಸ್ತರಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ಕಳೆದ ಮಂಗಳವಾರ ದಿಢೀರ್ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಲಾಗಿದೆ ಎಂದು ಘೋಷಿಸಿದ್ದರು. ಅಂದಿನಿಂದ ದೇಶಾದ್ಯಂತ ಹಣಕಾಸಿನ ತಾತ್ಕಾಲಿಕ ತರ್ತು ಪರಿಸ್ಥಿತಿ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT