ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಹಾಲು ಉತ್ಪಾದಕರ ಪ್ರೋತ್ಸಾಹ ಧನ ಒಂದು ರುಪಾಯಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಒಂದು ರುಪಾಯಿ ಹೆಚ್ಚಿಸುವುದಾಗಿ...

ರಾಮನಗರ: ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಒಂದು ರುಪಾಯಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.
ಇಂದು ರಾಮನಗರದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಸಿಎಂ, ನಮ್ಮದು ರೈತರ ಪರವಾದ ಸರ್ಕಾರ. ಅವರ ಕಷ್ಟಗಳಿಗೆ ನಾವು ಸ್ಪಂದಿಸುತ್ತೇವೆ.. ಪ್ರಸ್ತುತ ಲೀಟರ್ ಹಾಲಿಗೆ ನಾಲ್ಕು ರುಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆದರೂ ಇನ್ನು ಎರಡು ರುಪಾಯಿ ಪ್ರೋತ್ಸಾಹ ಧನ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಮತ್ತೆ ಒಂದು ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.
ಈ ಸಹಾಯಧನ ಹೆಚ್ಚಳದಿಂದ ನಿತ್ಯ 3.50 ಕೋಟಿ ರುಪಾಯಿ ರೈತರ ಬ್ಯಾಂಕ್ ಖಾತೆಗಳಿಗೆ ತಲುಪುತ್ತದೆ. ಹಾಲು ಉತ್ಪಾದಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿಎಂ ಕರೆ ನೀಡಿದರು.
ಇದೇ ವೇಳೆ ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಿಎಂ, ಕೇಂದ್ರದ ಕ್ರಮದಿಂದಾಗಿ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ರೈತರು, ಬಡವರು, ಕೂಲಿ ಕಾರ್ಮಿಕರು ತಮ್ಮ ಕೆಲಸಗಳನ್ನು ಬಿಟ್ಟು ಬ್ಯಾಂಕ್ ಗಳ ಮುಂದೆ ನಿಲ್ಲುವಂತಾಗಿದೆ. ಇದಕ್ಕೆ ಪೂರ್ವ ಸಿದ್ಧತೆಯ ಕೊರತೆ ಕಾರಣ ಎಂದರು. ಅಲ್ಲದೆ ಈ ಸಂಬಂಧ ತಾವು ಕೇಂದ್ರ ಹಣಕಾಸು ಸಚಿವರಿಗೆ ಪತ್ರಬರೆದಿರುವುದಾಗಿ ಹಾಗೂ ಆರ್ ಬಿಐ ಮುಖ್ಯಸ್ಥರಿಗೂ ಪತ್ರ ಬರೆಯುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT