ಬೆಂಗಳೂರು: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿಯ ನೋಟುಗಳನ್ನು ನಿಷೇಧಿಸಿದ ಬೆನ್ನಲ್ಲೇ ಕಪ್ಪು ಕುಳಗಳಿಗೆ ಶಾಕ್ ನೀಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಂಗಳೂರು, ಮಂಗಳೂರು ಹಾಗೂ ಗೋವಾದಲ್ಲಿ ದಾಳಿ ನಡೆಸಿ, ಕೋಟ್ಯಂತರ ರುಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಯಲಹಂಕದ ಫೈನಾಶ್ಶಿಯರ್ ಮನೆ, ಪ್ರತಿಷ್ಠಿತ ಜ್ಯುವೆಲ್ಲರಿ ಕಂಪನಿಯ ಮೂರು ಶಾಖೆ ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿರುವುದಾಗಿ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ ಅಲೆಕ್ಸ್ ಮಾಥ್ಯೂ ಅವರು ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೈನಾಶ್ಶಿಯರ್ ಕಚೇರಿ ಮೇಲೆ 16 ಕೋಟಿ ಜಪ್ತಿ ಮಾಡಲಾಗಿದ್ದು, ಅತಿ ಹೆಚ್ಚಿನ ಬೆಲೆಗೆ ಚಿನ್ನಾಭರಣ ಮಾರಾಟ ಮಾಡುತ್ತಿದ್ದ ಮೂರು ಜ್ಯುವೆಲ್ಲರಿ ಶಾಪ್ ಮೇಲೆ ದಾಳಿ ನಡೆಸಲಾಗಿದೆ. ಚಿನ್ನದ ಬಿಸ್ಕತ್ ಗಳನ್ನು ಕೊಂಡೊಯ್ಯುತ್ತಿದ್ದ(100 ಗ್ರಾಂನ 2 ಚಿನ್ನದ ಬಿಸ್ಕತ್) ವ್ಯಕ್ತಿಯನ್ನು ಬೆಂಗಳೂರಿನ( ಭುವನೇಶ್ವರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ )ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಮಂಗಳೂರಿನಲ್ಲಿಯೂ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದ ಐದು ಸಹಕಾರಿ ಬ್ಯಾಂಕ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿ ವಿವರಿಸಿದೆ. ಅಕ್ರವಾಗಿ ಹಣ ವಿನಿಯಮ ಮಾಡುತ್ತಿದ್ದ ಕೋ ಆಪರೇಟಿವ್ ಬ್ಯಾಂಕ್ ಗಳ ಮೇಲೆ ದಾಳಿ ನಡೆಸಿದ್ದು, ಸುಮಾರು 8 ಕೋಟಿ ರುಪಾಯಿಯಷ್ಟು ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪಣಜಿಯ ಹೋಟೆಲ್ ವೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ವ್ಯಕ್ತಿಯೊಬ್ಬರ ಬಳಿ ಇದ್ದ 96 ಲಕ್ಷ ರುಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics