ಮಾಜಿ ಪ್ರಧಾನಿ ಇಂದಿರಾ ಗಾಂಧಿ-ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ; ಗೌರವ ಸಲ್ಲಿಸಿದ ಮೋದಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ. 
"ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 
ಭಾರತದ ಮೊದಲ ಪ್ರಧಾನಮಂತ್ರಿ ಜವಾಹಾರ್ ಲಾಲ್ ನೆಹರು ಅವರ ಒಬ್ಬರೇ ಪುತ್ರಿ ಇಂದಿರಾ ಗಾಂಧಿ.
ನವೆಂಬರ್ ೧೯, ೧೯೧೭ ರಲ್ಲಿ ಜನಿಸಿದ್ದ ಇಂದಿರಾ ಗಾಂಧಿ ಭಾರತದ ಮೊದಲ ಮಹಿಳಾ ಪ್ರಧಾನಿ ಮತ್ತು ಕೊನೆಯ ಮಹಿಳಾ ಪ್ರಧಾನಿ ಕೂಡ. ಜನವರಿ ೧೯೬೬ ರಿಂದ ಮಾರ್ಚ್ ೧೯೭೭ ರವರೆಗೆ ನಿರಂತರವಾಗಿ ಮೂರು ಬಾರಿ ಪ್ರಧಾನಿಯಾಗಿದ್ದರು. ನಂತರ ಜನವರಿ ೧೪, ೧೯೮೦ ರಲ್ಲಿ ನಾಲ್ಕನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅವರನ್ನು ಅಕ್ಟೋಬರ್ ೩೧, ೧೯೮೪ ರಂದು ಅವರ ಅಂಗರಕ್ಷಕರೇ ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!