ಸುಮಿತ್ರಾ ಮಹಾಜನ್ ಮೇಲೆ ಪೇಪರ್ ಎಸೆತ 
ಪ್ರಧಾನ ಸುದ್ದಿ

ತಾರಕಕ್ಕೇರಿದ ನೋಟು ನಿಷೇಧ ಗದ್ದಲ: ಸ್ಪೀಕರ್ ಮೇಲೆ ಪೇಪರ್ ಎಸೆತ, ಕಲಾಪ ಮುಂದೂಡಿಕೆ

ಕೇಂದ್ರ ಸರ್ಕಾರದ ನೋಟು ನಿಷೇಧ ವಿಚಾರ ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಸಮಾಜವಾದಿ ಪಕ್ಷದ ಸದಸ್ಯ ತೀವ್ರ ಗದ್ದಲ ವೇರ್ಪಡಿಸಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಮೇಲೆ ಪೇಪರ್ ಎಸೆದ ಪ್ರಸಂಗ ನಡೆದ ಕಾರಣ ಕಲಾಪವನ್ನು ಮುಂದೂಡಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧ ವಿಚಾರ ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಸಮಾಜವಾದಿ ಪಕ್ಷದ ಸದಸ್ಯ ತೀವ್ರ ಗದ್ದಲ ವೇರ್ಪಡಿಸಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಮೇಲೆ ಪೇಪರ್  ಎಸೆದ ಪ್ರಸಂಗ ನಡೆದ ಕಾರಣ ಕಲಾಪವನ್ನು ಮುಂದೂಡಲಾಗಿದೆ.

ಕೇಂದ್ರ ಸರ್ಕಾರ ಕೂಡಲೇ ನೋಟು ನಿಷೇಧ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ ಸಮಾಜವಾದಿ ಪಕ್ಷದ ಮುಖಂಡ ಅಕ್ಷಯ್ ಯಾದವ್ ಅವರು, ಆಕ್ರೋಶ ಭರಿತರಾಗಿ ತಮ್ಮ ಬಳಿ ಇದ್ದ ಪೇಪರ್ ಅನ್ನು ನೋಡ  ನೋಡುತ್ತಲೇ ಸ್ಪೀಕರ್ ಸುಮಿತ್ರಾ ಮಹಾಜನ್ ಅವರತ್ತ ತೂರಿದರು.

ಕೇಂದ್ರ ಸರ್ಕಾರದ ನೋಟು ನಿಷೇಧದಿಂದ ಮಧ್ಯಮ ವರ್ಗದವರಿಗೆ ಭಾರಿ ಅನಾನುಕೂಲವಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ನೋಟು ನಿಷೇಧ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದದರು. ಇದಕ್ಕೆ  ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಪ್ರತಿ ನಿತ್ಯ ಒಂದೇ ಬೇಡಿಕೆಯನ್ನಿಟ್ಟುಕೊಂಡು ಸುಗಮ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದೀರಿ. ಇದು ಸರಿಯಲ್ಲ ಎಂದು ಆಕ್ರೋಶ ಭರಿತರಾಗಿ ಹೇಳಿದರು. ಸ್ಪೀಕರ್ ಅವರಿಂದ ಉತ್ತರ  ಬರುತ್ತಿದ್ದಂತೆಯೇ ಆಕ್ರೋಶಗೊಂಡ ಕಾಂಗ್ರೆಸ್, ಟಿಎಂಸಿ ಹಾಗೂ ಸಮಾಜವಾದಿ ಪಕ್ಷದ ಸದಸ್ಯರು ಸದನದ ಬಾವಿಗಿಳಿದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಆದರೆ ಆಪ್ ಮತ್ತು ಎಐಎಡಿಎಂಕೆ ಸದಸ್ಯರು ಮಾತ್ರ ತಮ್ಮ ತಮ್ಮ ಸ್ಥಾನದಲ್ಲೇ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸಾಕಷ್ಟು ಬಾರಿ ಸದಸ್ಯರನ್ನು ಶಾಂತಗೊಳಿಸುವ ಯತ್ನ ಮಾಡಿದರಾದರೂ ಸಫಲವಾಗಲಲ್ಲಿ. ಬದಲಿಗೆ ತಮ್ಮತ್ತಲೇ ಸದಸ್ಯರು ಪೇಪರ್ ತೂರಿದ ಕಾರಣ ತೀವ್ರ  ಅಸಮಾಧಾನಗೊಂಡ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಮಧ್ಯಾಹ್ಮಕ್ಕೆ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!