ರಾಜ್ಯಸಭೆ ಕಲಾಪ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನೋಟು ನಿಷೇಧ ಗದ್ದಲ: "ನೋ ಪಿಎಂ, ನೋ ಡಿಬೇಟ್" ಎಂದ ಪ್ರತಿಪಕ್ಷಗಳು

ಸಂಸತ್ತಿನ ಉಭಯ ಕಲಾಪದಲ್ಲಿ ನೋಟು ನಿಷೇಧ ಗದ್ದಲ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಈ ಬಗ್ಗೆ ಖುದ್ದು ಉತ್ತರಿಸಬೇಕು ಎಂದು ಪ್ರತಿಪಕ್ಷ ಸದಸ್ಯರು ಪಟ್ಟು ಹಿಡಿದ ಹಿನ್ನಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ.

ನವದೆಹಲಿ: ಸಂಸತ್ತಿನ ಉಭಯ ಕಲಾಪದಲ್ಲಿ ನೋಟು ನಿಷೇಧ ಗದ್ದಲ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಈ ಬಗ್ಗೆ ಖುದ್ದು ಉತ್ತರಿಸಬೇಕು ಎಂದು ಪ್ರತಿಪಕ್ಷ ಸದಸ್ಯರು ಪಟ್ಟು ಹಿಡಿದ ಹಿನ್ನಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ.

ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ನೋಟು ನಿಷೇಧ ಕುರಿತಂತೆ ತಮ್ಮ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ಮುಖಂಡರು ಈಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕಲಾಪಕ್ಕೆ ಆಗಮಿಸಿ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ಅವರು ಕಲಾಪಕ್ಕೆ ಆಗಮಿಸದಿದ್ದರೇ ಕಲಾಪವನ್ನು ನಡೆಸಲು ಬಿಡುವುದಿಲ್ಲ ಎಂದು ವಿಪಕ್ಷ ಮುಖಂಡರ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಗುಲಾಂ ನಬಿ ಅಜಾದ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಲಾಪಕ್ಕೆ ಪದೇ ಪದೇ ಗೈರಾಗುವ ಮೂಲಕ ಸದನಕ್ಕೆ ಅಪಮಾನ ಮಾಡಿದ್ದಾರೆ. ಹೀಗಾಗಿ ಅವರು ಸದನದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಆಜಾದ್ ಅವರ ಹೇಳಿಕೆಗೆ ಬಿಜೆಪಿ ಸದಸ್ಯರಿಂದ ಭಾರಿ ವಿರೋಧ್ಯ ವ್ಯಕ್ತವಾಯಿತು. ಈ ವೇಳೆ ಉಭಯ ನಾಯಕರು ಪರಸ್ಪರ ವಾಗ್ವಾದ ನಡೆಸಿದರು. ಈ ಹಿನ್ನಲೆಯಲ್ಲಿ ಉಪಸಭಾಪತಿ ಪಿಜೆ ಕುರಿಯನ್ ಅವರು ಕಲಾಪವನ್ನು 12 ಗಂಟೆಗೆ ಮುಂದೂಡಿದ್ದಾರೆ.

ಇದಕ್ಕೂ ಮೊದಲು ಉಪಸಭಾಪತಿಗಳು ಎಷ್ಟೇ ಮನವಿ ಮಾಡಿಕೊಂಡರೂ ಇದಕ್ಕೆ ಕ್ಯಾರೇ ಎನ್ನದ ವಿಪಕ್ಷ ಸದಸ್ಯರು ತಮ್ಮ ಪ್ರತಿಭಟನೆ ಮುಂದುವರೆಸಿದ ಹಿನ್ನಲೆಯಲ್ಲಿ ಅನ್ಯ ಮಾರ್ಗವಿಲ್ಲದೇ ಕಲಾಪವನ್ನು ಮುಂದೂಡಿಕೆ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!