ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಮ್ಮ ಆದೇಶ ನಿರಾಕರಿಸುವುದನ್ನು ನಿಲ್ಲಿಸಿ: ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಕಾವೇರಿ ವಿಚಾರವಾಗಿ ನಾವು ನೀಡುತ್ತಿರುವ ಆದೇಶಗಳನ್ನು ನಿರಾಕರಿಸುವುದನ್ನು ನಿಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ನವದೆಹಲಿ: ಕಾವೇರಿ ವಿಚಾರವಾಗಿ ನಾವು ನೀಡುತ್ತಿರುವ ಆದೇಶಗಳನ್ನು ನಿರಾಕರಿಸುವುದನ್ನು ನಿಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.

ಕಾವೇರಿ ವಿಚಾರ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ  ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ತಮಿಳುನಾಡಿಗೆ ನೀರು ಬಿಡುವ ಕುರಿತು ಸೂಕ್ತ ತೀರ್ಮಾನ ಕೈಗೊಂಡು ನಾಳೆ ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ತಿಳಿಸುವಂತೆ ರಾಜ್ಯ  ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಇದೇ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯವೆಂದು ಹೇಳಿರುವ ಕೇಂದ್ರ ಸರ್ಕಾರದ ಅರ್ಜಿ ಕೂಡ ಇಂದೇ ವಿಚಾರಣೆಗೆ ಬರುವ ಸಾಧ್ಯತೆ ಇದ್ದು, ಕಳೆದ ಸೆ.30ರಂದು  ನಿರ್ವಹಣಾ ಮಂಡಳಿ ರಚಿಸುವುದಾಗಿ ಹೇಳಿದ್ದ ಅಟಾರ್ನಿ ಜನರಲ್ ಮುಕಲ್ ರೋಹ್ಟಗಿ ಅವರು ಇಂದು ಕೇಂದ್ರ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಆದೇಶದಂತೆ ನಿರ್ವಹಣಾ  ಮಂಡಳಿ ರಚನೆ ಸಾಧ್ಯವಿಲ್ಲ. ನಿರ್ವಹಣಾ ಮಂಡಳಿ ರಚನೆ ಜವಾಬ್ದಾರಿ ಸಂಸತ್ತಿನ ಕರ್ತವ್ಯವಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ನಿರ್ವಹಣಾ ಮಂಡಳಿ ರಚಿಸಬೇಕಿದೆ ಎಂದು  ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ