ಪ್ರಧಾನ ಸುದ್ದಿ

ಅಕ್ರಮ ಡಿನೋಟಿಫಿಕೇಷನ್; ಯಡಿಯೂರಪ್ಪ ವಿರುದ್ಧ ಮತ್ತೆ ಲೋಕಾಯುಕ್ತಕ್ಕೆ ದೂರು

Lingaraj Badiger
ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮತ್ತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಯಡಿಯೂರಪ್ಪ ಅರು ಕಾನೂನು ಬಾಹಿರ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಆರೋಪಿಸಿ ವಕೀಲ ಸಿರಾಜಿನ್ ಬಾಷಾ ಅವರು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ.
ಈ ಹಿಂದೆ ಬಿಎಸ್ ವೈ ವಿರುದ್ಧ ಐದು ಕೇಸ್ ಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆಗಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಪೂರ್ವಾನುಮತಿ ನೀಡಿದ್ದರಿಂದ ಹೈಕೋರ್ಟ್ ಬಿಎಸ್ ವೈ ವಿರುದ್ಧದ ಈ ಐದು ಪ್ರಕರಣಗಳನ್ನು ರದ್ದುಪಡಿಸಿತ್ತು.
ನಂತರ ಯಡಿಯೂರಪ್ಪ ಅವರು ಈಗ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಅನುಮತಿಯ ಅಗತ್ಯವಿಲ್ಲ ಎಂದು ಹಾಲಿ ರಾಜ್ಯಪಾಲ ವಿಆರ್ ವಾಲಾ ತಿಳಿಸಿದ್ದರಿಂದ, ಬಾಷಾ ಅವರು 5 ಪ್ರಕರಣಗಳನ್ನು ರದ್ದುಪಡಿಸಿರುವ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ನಿಗದಿಪಡಿಸಿದೆ. ಏತನ್ಮಧ್ಯೆ ರಾಜ್ಯಪಾಲರ ಅನುಮತಿ ಅಗತ್ಯ ಇಲ್ಲದ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಮತ್ತೆ ಬಿಎಸ್ ವೈ ವಿರುದ್ಧ ದೂರು ಸಲ್ಲಿಸಿದ್ದಾರೆ.
SCROLL FOR NEXT