ಜಯಲಲಿತಾ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜಯಲಲಿತಾ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಿದ ಮತ್ತಿಬ್ಬರ ಬಂಧನ

ತಮಿಳು ನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಮತ್ತೆ ಇಬ್ಬರನ್ನು

ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ. 
ಎಐಡಿಎಂಕೆ ಪಕ್ಷದ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ನೀಡಿದ ದೂರಿನ ಮೇಲೆ, ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಭೀತಿ ಹಬ್ಬಿಸುತ್ತಿದ್ದಾರೆ ಎಂದು ಸತೀಶ್ ಕುಮಾರ್ ಮತ್ತು ಮಾದಸ್ವಾಮಿ ಎಂಬುವವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 
ಜಯಲಲಿತಾ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹರಡಿದ್ದಾರೆ ಎಂಬ ದೂರಿನ ಮೇರೆಗೆ ಪೊಲೀಸರು ಇಲ್ಲಿಯವರೆಗೆ 43 ಪ್ರಕರಣಗಳನ್ನು ದಾಖಲಿಸಿದ್ದಾರೆ. 
ಜ್ವರ ಮತ್ತು ದೇಹದಲ್ಲಿ ನೀರಿನ ಅಂಶದ ಕೊರತೆಯಿಂದಾಗಿ 68 ವರ್ಷದ ಮುಖ್ಯಮಂತ್ರಿಯವರನ್ನು ಸೆಪ್ಟೆಂಬರ್ 22 ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇನ್ನು ಆಸ್ಪತ್ರೆಯಲ್ಲಿಯೇ ಉಳಿದಿದ್ದು, ಚೇತರಿಸಿಕೊಳುತ್ತಿರುವುದಾಗಿ ಅಪೋಲೋ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

SCROLL FOR NEXT