ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಎಎಪಿ ಸೂರತ್ ರ್ಯಾಲಿಗೆ ಬಿಜೆಪಿ ಅಡ್ಡಿಪಡಿಸುವ ಆತಂಕ ವ್ಯಕ್ತಪಡಿಸಿದ ಕೇಜ್ರಿವಾಲ್

ಭಾನುವಾರ ಗುಜರಾತಿನ ಸೂರತ್ ನಲ್ಲಿ ಆಮ್ ಆದ್ಮಿ ಪಕ್ಷ ನಡೆಸಲಿರುವ ರ್ಯಾಲಿಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಅಡ್ಡಿಪಡಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್

ನವದೆಹಲಿ: ಭಾನುವಾರ ಗುಜರಾತಿನ ಸೂರತ್ ನಲ್ಲಿ ಆಮ್ ಆದ್ಮಿ ಪಕ್ಷ ನಡೆಸಲಿರುವ ರ್ಯಾಲಿಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಅಡ್ಡಿಪಡಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಆತಂಕ ವ್ಯಕ್ತಪಡಿಸಿದ್ದಾರೆ. 
"ಸೂರತ್ ಸಭೆಗೆ ಬಿಜೆಪಿ ಅಡ್ಡಿ? ಇದು ಪ್ರಜಾಪ್ರಭುತ್ವಕ್ಕೆ ಧಕ್ಕೆ. ಬಿಜೆಪಿ ಇದನ್ನು ಮಾಡಬಾರದು. ಜನರಿಗೆ ತಮ್ಮ ತೊಂದರೆಗಳನ್ನು ತೋಡಿಕೊಳ್ಳಲಾದರೂ ಅವಕಾಶ ನೀಡಿ" ಎಂದು ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. ಗುಜರಾತಿನಲ್ಲಿ ನಡೆಯಲಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಮಾವೇಶದ ಸಭೆಗೆ ಬಿಜೆಪಿ ಅಡ್ಡಿಪಡಿಸಲಿದೆ ಎಂದು ಪತ್ರಿಕೆ ವರದಿ ಮಾಡಿತ್ತು. 
ಕೇಜ್ರಿವಾಲ್ ಶುಕ್ರವಾರ ಗುಜರಾತಿನ ಎರಡು ದಿನದ ಪ್ರವಾಸಕ್ಕೆ ತೆರಳಲಿದ್ದಾರೆ. ಶುಕ್ರವಾರ ಸಂಜೆ ಅಹಮದಾಬಾದಿಗೆ ತೆರಳಲಿರುವ ಅವರು ಭಾನುವಾರ ಸೂರತ್ ಗೆ ತೆರಳಲಿದ್ದಾರೆ. 
ಅಹಮದಾಬಾದಿನಲ್ಲಿ ಅವರು ಹಲವು ಸಂಘಟನೆಗಳ ಮತ್ತು ಅಭಿಯಾನಗಳ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!