ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಂತರ ಇದೀಗ ಪ್ರಧಾನಿ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಲಿದ್ದಾರೆ.
ನಿನ್ನೆಯಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಸಿಎಂ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದರು.
ಸೆ.22ರಿಂದ ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮೂಲಗಳ ಪ್ರಕಾರ ತಮಿಳುನಾಡು ಸಿಎಂ ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ.