ಚೆನ್ನೈ: ಕಳೆದ ಹಲವು ದಿನಗಳಿಂದ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಮಾತನಾಡುತ್ತಿದ್ದಾರೆ ಎಂದು ಶುಕ್ರವಾರ ಸಂಜೆ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದ್ದು, ಅವರಿಗೆ ಹೃದಯ, ಮಧುಮೇಹ ಹಾಗೂ ಫಿಜಿಯೋಥೆರಪಿ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಎನ್.ಸತ್ಯಭಾಮಾ ಅವರು ಸಹಿ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿರಿಯ ಹೃದಯ ತಜ್ಞರು, ಹಿರಿಯ ಉಸಿರಾಟ ತಜ್ಞರು ಸಾಂಕ್ರಾಮಿಕ ರೋಗಗಳ ಇಲಾಖೆಯ ಹಿರಿಯ ವೈದರು ಸೇರಿದಂತೆ ಹಲವು ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಪ್ರಕಣೆ ಹೇಳಿದೆ.
ಸೆ.22ರಿಂದ ಜಯಲಲಿತಾ ಅವರು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಮಿಳುನಾಡು ಸಿಎಂ ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ.