ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಸಲ್ಲಿಸುತ್ತಿರುವ ಸಿಎಂ 
ಪ್ರಧಾನ ಸುದ್ದಿ

ಆತ್ಮಹತ್ಯೆಗೂ ಮುನ್ನ ಕುಟುಂಬದ ಬಗ್ಗೆ ಯೋಚಿಸಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ...

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಇಂದು ಕೋರಮಂಗಲದ ಕೆ.ಎಸ್.ಆರ್.ಪಿ ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿ ಮಾತನಾಡಿದ ಸಿಎಂ, ಪೊಲೀಸರು ಹೆಚ್ಚಿನ ಆತಸ್ಥೈರ್ಯ ಹೊಂದಿ ಕರ್ತವ್ಯ ನಿರ್ವಹಿಸಬೇಕು. ಯಾರೂ ಆತ್ಮಹತ್ಯೆ ಮಾಡಿಕೊಳ್ಳುವ ದುಸ್ಸಾಹಸಕ್ಕೆ ಮುಂದಾಗಬಾರದು ಎಂದರು.
'ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಕುಟುಂಬದ ಬಗ್ಗೆ ಯೋಚಿಸಬೇಕು. ತಾನು ಸಾಯುವುದರಿಂದ ತಂದೆ,ತಾಯಿ .ಪತ್ನಿ ಮಕ್ಕಳಿಗಾಗುವ ಸಂಕಷ್ಟದ ಕುರಿತು ಯೋಚನೆ ಮಾಡಬೇಕು. ಪೊಲೀಸರಿಗೆ ಎಲ್ಲಾ ರೀತಿಯ ನೆರವು ಸರಕಾರದ ವತಿಯಿಂದ ಕಲ್ಪಿಸಲಾಗುತ್ತಿದ್ದು ,ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರಿಗೆ ಕರ್ತವ್ಯ ನಿಮಿತ್ತ ಆಗಮಿಸಿದ ವೇಳೆ ವಸತಿ ಸೌಕರ್ಯಕ್ಕೂ ವ್ಯವಸ್ಥೆ ಮಾಡಿರುವುದಾಗಿ  ತಿಳಿಸಿದರು. 
ಸಮಾಜದಲ್ಲಿ ಶಾಂತಿ ನೆಲೆಸಲು, ದೇಶದ ಅಭಿವೃದ್ಧಿಗೆ ಕಾನೂನು ಸುವ್ಯವಸ್ಥೆ ಮುಖ್ಯ. ಪೊಲೀಸ್ ಇಲಾಖೆ ಸಮಾಜದ ರಕ್ಷಣೆಯನ್ನು ನಿರಂತರವಾಗಿ ಮಾಡುತ್ತಿದೆ. ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಿರಿದು. ಪೊಲೀಸರು ದಕ್ಷತೆಯಿಂದ ಕಾರ್ಯ ನಿರ್ವಹಿಸಲು ನಮ್ಮ ಸರ್ಕಾರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಪ್ರಸಕ್ತ ವರ್ಷ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ 22 ಮಂದಿ ಪೊಲೀಸ್‌ ಸಿಬಂದಿ ಹುತಾತ್ಮರಾಗಿದ್ದು ದೇಶದಲ್ಲಿ 473 ಸಿಬಂದಿ ಹುತಾತ್ಮರಾಗಿದ್ದಾರೆ. 
ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ನಟ ಯಶ್‌,ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಗಣ್ಯರು ಭಾಗಿಯಾಗಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video