ಕೇಂದ್ರ ಸಚಿವ ಗಿರಿರಾಜ್ ಸಿಂಗ್ 
ಪ್ರಧಾನ ಸುದ್ದಿ

ಹಿಂದೂಗಳು ಜನಸಂಖ್ಯೆ ಹೆಚ್ಚಿಸಿಕೊಳ್ಳಬೇಕು: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಹೆಚ್ಚು ಮಕ್ಕಳನ್ನು ಹೆರುವ ಮೂಲಕ ಹಿಂದೂಗಳು ತಮ್ಮ ಜನಸಂಖ್ಯೆಯನ್ನು ವೃದ್ಧಿಸಿಕೊಳ್ಳುವತ್ತ ಗಂಭೀರವಾಗಿ ಚಿಂತಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ಹೇಳಿದ್ದಾರೆ.

ಪಾಟ್ನಾ: ಹೆಚ್ಚು ಮಕ್ಕಳನ್ನು ಹೆರುವ ಮೂಲಕ ಹಿಂದೂಗಳು ತಮ್ಮ ಜನಸಂಖ್ಯೆಯನ್ನು ವೃದ್ಧಿಸಿಕೊಳ್ಳುವತ್ತ ಗಂಭೀರವಾಗಿ ಚಿಂತಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ಹೇಳಿದ್ದಾರೆ.
"ದೇಶದಲ್ಲಿ ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಅಗತ್ಯ ಇದೆ. ದೇಶದ ಎಂಟು ರಾಜ್ಯಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಅವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು" ಎಂದು ಗಿರಿರಾಜ್ ಮಾಧ್ಯಮಗಳಿಗೆ ಹೇಳಿದ್ದಾರೆ. 
ಈ ಹಿಂದೆ ಕಳೆದ ಆಗಸ್ಟ್ ನಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಹೆಚ್ಚೆಚ್ಚು ಮಕ್ಕಳಿಗೆ ಜನ್ಮ ನೀಡುವ ಮೂಲಕ ಹಿಂದೂಗಳು ಜನಸಂಖ್ಯೆ ಹೆಚ್ಚಿಸಿಕೊಳ್ಳಬೇಕು ಎಂಬುದನ್ನು ಮತ್ತೆ ನೆನಪಿಸಿರುವ ಗಿರಿರಾಜ್ ಹೆಚ್ಚು ಮಕ್ಕಳನ್ನು ಹೇರುವುದನ್ನು ಯಾವ ಕಾನೂನು ತಡೆಯುವುದಿಲ್ಲ ಎಂದಿದ್ದಾರೆ. 
"ಭಾರತದ ಸ್ವಾತಂತ್ರ್ಯದ ಸಮಯದಲ್ಲಿ 10% ಇದ್ದ ಮುಸ್ಲಿಂ ಜನಸಂಖ್ಯೆ ಈಗ 24% ಗೆ ಏರಿದೆ. ಆದರೆ ಹಿಂದೂಗಳ ಜನಸಂಖ್ಯೆ 1947 ರಲ್ಲಿ 90% ಇದ್ದು ಈಗ 76% ಗೆ ಇಳಿದಿದೆ" ಎಂದು ಸಚಿವರು ಹೇಳಿದ್ದಾರೆ. 
ಮುಸ್ಲಿಮರ ಜನಸಂಖ್ಯೆ ಹೆಚ್ಚಿರುವುದರಿಂದ ಅವರಿಗೆ ಅಲ್ಪಸಂಖ್ಯಾತರು ಎಂದು ನೀಡಲಾಗಿರುವ ಸವಲತ್ತುಗಳನ್ನು ಕೂಡ ಮರುಪರಿಶೀಲಿಸಬೇಕೆಂದು ಅವರು ಕರೆ ನೀಡಿದ್ದಾರೆ. 
ಗಿರಿರಾಜ್ ಬಿಹಾರದ ನಾವಾಡಾ ದಿಂದ ಪ್ರತಿನಿಧಿಸುವ ಬಿಜೆಪಿ ಲೋಕಸಭಾ ಸದಸ್ಯ. ನರೇಂದ್ರ ಮೋದಿಯವರ ಅತಿ ದೊಡ್ಡ ಬೆಂಬಲಿಗ ಮತ್ತು ಹಿಂದುತ್ವ ರಾಜಕೀಯದ ಪ್ರತಿಪಾದಿ ಎಂದೇ ಬಿಂಬಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ