ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಿಜೆಪಿ ವಿರೋಧದ ನಡುವೆಯೇ ನ.10ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶ

ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ನವೆಂಬರ್ 10ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಮುಂದಾಗಿದೆ.

ಟಿಪ್ಪು ಸುಲ್ತಾನ್
Lingaraj Badiger
Updated On : 26 Oct 2016, 7:22 am
ಬೆಂಗಳೂರು: ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ನವೆಂಬರ್ 10ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಮುಂದಾಗಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 10ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಅಲ್ಲದೆ ಈ ಸಭೆಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೂ ಆಹ್ವಾನ ನೀಡಲಾಗಿದೆ.

Advertisement

Advertisement

ಪ್ರಬಲ ವಿರೋಧದ ನಡುವೆಯೂ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗಷ್ಟೇ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement