ಮದರ್ ತೆರೆಸಾ 
ಪ್ರಧಾನ ಸುದ್ದಿ

ಪೋಪ್ ಫ್ರಾನ್ಸಿಸ್ ರಿಂದ ಮದರ್ ತೆರೆಸಾಗೆ ಸಂತ ಪದವಿ ಪ್ರದಾನ

ತಮ್ಮ ಜೀವಿತಾವಧಿಯನ್ನು ಜನರ ಸೇವೆಗಾಗಿಯೇ ಮುಡಿಪಾಗಿಟ್ಟು, ನೊಂದವರು ಹಾಗೂ ದೀನ ದಲಿತರ ತಾಯಿ ಎಂದೇ ಖ್ಯಾತಿ ಗಳಿಸಿದ್ದ ನೊಬೆಲ್....

ವ್ಯಾಟಿಕನ್ ಸಿಟಿ: ತಮ್ಮ ಜೀವಿತಾವಧಿಯನ್ನು ಜನರ ಸೇವೆಗಾಗಿಯೇ ಮುಡಿಪಾಗಿಟ್ಟು, ನೊಂದವರು ಹಾಗೂ ದೀನ ದಲಿತರ ತಾಯಿ ಎಂದೇ ಖ್ಯಾತಿ ಗಳಿಸಿದ್ದ ನೊಬೆಲ್ ಪುರಸ್ಕೃತೆ ಮದರ್ ತೆರೇಸಾ ಅವರಿಗೆ ಭಾನುವಾರ ಸಂತ ಪದವಿ ಪ್ರದಾನ ಮಾಡಲಾಯಿತು. 
ಕ್ರಿಶ್ಚಿಯನ್ನರ ಕಾಶಿ ವ್ಯಾಟಿಕನ್ ಸಿಟಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ 133 ದೇಶಗಳಲ್ಲಿ ಮಿಷನರೀಸ್ ಆಫ್ ಚಾರಿಟಿಯ ಸಂಸ್ಥಾಪಕಿ ಮದರ್ ತೆರೆಸಾ ಅವರಿಗೆ ರೋಮನ್ ಕ್ಯಾಥೋಲಿಕ್ ಚರ್ಚ್ ನ ಪೋಪ್ ಫ್ರಾನ್ಸಿಸ್ ಅವರು ಇಂದು ಸಂತ ಪದವಿ ಪ್ರದಾನ ಮಾಡಿದರು. ತೆರೆಸಾ ಅವರ ಮರಣಾನಂತರ ನಡೆದ ಎರಡು ಪವಾಡಗಲು ದೃಢಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಸಂತ ಪದವಿ ನೀಡಲಾಗಿದೆ.
ವಿಶ್ವದಾದ್ಯಂತ ಸುಮಾರು ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಪೋಪ್ ಫ್ರಾನ್ಸಿಸ್ ಅವರು ತೆರೆಸಾ ಅವರನ್ನು ಹೊಸ ಸಂತ ಎಂದು ಘೋಷಿಸಿದರು.
ಭಾರತದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದ 12 ಮಂದಿಯ ನಿಯೋಗ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಎರಡು ರಾಜ್ಯ ಸರ್ಕಾರಗಳ ನಿಯೋಗ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಯಾದವು.
ಕೋಲ್ಕತಾದ ಬೀದಿ ಬೀದಿಗಳಲ್ಲಿ 45 ವರ್ಷಗಳ ಕಾಲ ಬಡವರು ಮತ್ತು ರೋಗಿಗಳ ಸೇವೆ ಮಾಡುತ್ತಾ ಬಂದ ತೆರೆಸಾ ಅವರ 2 ಪವಾಡಗಳು ಸಾಬೀತಾದ ಕಾರಣ ಅವರನ್ನು ಸಂತರೆಂದು ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಕೋಲ್ಕತಾದಲ್ಲಿ ಸಂಭ್ರಮ ಮನೆಮಾಡಿದೆ. ಸಮಾರಂಧಲ್ಲಿ ಸಾಮೂಹಿಕ ಪ್ರಾರ್ಥನೆಗಳು ಸೇರಿದಂತೆ ಇನ್ನಿತರೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel