ಜಿ20 ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ (ಟ್ವಿಟರ್ ಚಿತ್ರ) 
ಪ್ರಧಾನ ಸುದ್ದಿ

ದಕ್ಷಿಣ ಏಷ್ಯಾದ ಒಂದು ದೇಶದಿಂದ ಭಯೋತ್ಪಾದನೆ ವಿಸ್ತರಣೆ: ಪ್ರಧಾನಿ ಮೋದಿ

ದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ಹ್ಯಾಂಗ್ ಜೌ: ದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ಚೀನಾದ ಹ್ಯಾಂಗ್ ಜೌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಯೋತ್ಪಾದನೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಏಷ್ಯಾದ ಒಂದು ದೇಶ ತನ್ನ  ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಹೇಳಿದರು.

ಜಿ 20 ಶೃಂಗದಲ್ಲಿ ಬ್ರಿಕ್ಸ್ ರಾಷ್ಟ್ರಗಳ ಪ್ರತ್ಯೇಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸುವಂತೆ ಸದಸ್ಯ  ರಾಷ್ಟ್ರಗಳಿಗೆ ಕರೆ ನೀಡಿದರು. ಅಂತೆಯೇ ಉಗ್ರರಿಗೆ ಹಣಕಾಸು ಮತ್ತಿತರ ನೆರವು ನೀಡುತ್ತಿರುವವರ ವಿರುದ್ಧ ಸಂಘಟಿತ ಕ್ರಮ ಕೈಗೊಳ್ಳಬೇಕಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನವನ್ನು  ತರಾಟೆಗೆ ತೆಗೆದುಕೊಂಡರು.

"ದಕ್ಷಿಣ ಏಷ್ಯಾ ಅಥವಾ ವಿಶ್ವದ ಯಾವುದೇ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಉಗ್ರರು ಬ್ಯಾಂಕ್ ಅಥವಾ ಶಸ್ತ್ರಾಸ್ತ್ರ ಕಾರ್ಖಾನೆ ಹೊಂದಿಲ್ಲ. ಹೀಗಿದ್ದರೂ ಉಗ್ರರ ಕೈಗೆ ಶಸ್ತ್ರಾಸ್ತ್ರಗಳು  ಸರಾಗವಾಗಿ ಸೇರುತ್ತಿವೆ. ಅವರಿಗೆ ಬೇರೊಬ್ಬರು ನೆರವು ನೀಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಇಂಥಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬ್ರಿಕ್ಸ್ ರಾಷ್ಟ್ರಗಳು ಪಣ ತೊಡಬೇಕು. ಕೆಲ  ದೇಶಗಳಲ್ಲಿ ಭಯೋತ್ಪಾದನೆಯನ್ನೇ ಆಡಳಿತ ನೀತಿಯನ್ನಾಗಿಸಿಕೊಂಡಿದ್ದಾರೆ. ಇದು ಇಡೀ ವಿಶ್ವಕ್ಕೇ ದೊಡ್ಡ ರಕ್ಷಣಾ ಸವಾಲಾಗಿ ಎದುರಾಗಿದ್ದು, ಇದನ್ನು ತಡೆಯುನ ಅನಿವಾರ್ಯತೆ  ಸೃಷ್ಟಿಯಾಗಿದೆ" ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)