ಟೌನ್ ಹಾಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ 
ಪ್ರಧಾನ ಸುದ್ದಿ

'ಕಾವೇರಿ'ದ ಕರ್ನಾಟಕ ಬಂದ್ ಯಶಸ್ವಿ, ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ಜನಜೀವನ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ವಿವಿಧ ಕನ್ನಡುಪರ ಸಂಘಟನೆಗಳು ಕರೆ...

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ವಿವಿಧ ಕನ್ನಡುಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಶಾಂತಿಯುತವಾಗಿ ಯಶಸ್ವಿಯಾಗಿದೆ.
ರಾಜ್ಯಾದ್ಯಂತ ಬಂದ್ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಪ್ರಮುಖ ಮಾರುಕಟ್ಟೆಗಳು, ಮಾಲ್ ಗಳು ಸರ್ಕಾರಿ ಬಸ್ ಹಾಗೂ ಇತರೆ ಯಾವುದೇ ಖಾಸಗಿ ವಾಹನಗಳು ಸಹ ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಕರ್ನಾಟಕ ಸಂಪೂರ್ಣ ಸ್ತಬ್ಧವಾಗಿತ್ತು, 
ಬಂದ್ ಹಿನ್ನಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಬೆಂಬಲ ನೀಡಿದ್ದು, ಸ್ವಯಂ  ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿ ಬಂದ್ ಗೆ ತಮ್ಮ ಬೆಂಬಲ ವ್ಯಕ್ಚಪಡಿಸಿದ್ದರು. ಇದೀಗ ಸಂಜೆ 6 ಗಂಟೆಯ ನಂತರ ಸರ್ಕಾರಿ ಬಸ್ ಗಳ ಸೇವೆ ಆರಂಭಗೊಂಡಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.
ಶಿವಾಜಿನಗರದಿಂದ ಹಲವು ಬಿಎಂಟಿಸಿ ಬಸ್ ಗಳ ಸಂಚಾರ ಆರಂಭಗೊಂಡಿದ್ದು, ಸಿಟಿ ಮಾರ್ಕೆಟ್, ಮೆಜಸ್ಟಿಕ್ ಹಾಗೂ ಕೆಂಗೇರಿ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳು ಸಂಚರಿಸುತ್ತಿವೆ.
ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಹೆದ್ದಾರಿ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖವಾಗಿ ಬೆಂಗಳೂರು-ಮಂಡ್ಯ-  ಮೈಸೂರು ಹೆದ್ದಾರಿ ಬಹುತೇಕ ಸ್ಥಬ್ಧವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ