ರೈತರ ಹೊಲಗಳಿಗೆ ನೀರು ಬಿಟ್ಟರೂ ಬಂದ್ ಯಾಕೆ?: ರಮ್ಯಾ
ಕನ್ನಡಪರ ಸಂಘಟನೆಗಳು ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ವಿವಾದಾತ್ಮಕ ಟ್ವೀಟ್ ಮಾಡಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ...
ಬೆಂಗಳೂರು: ಕನ್ನಡಪರ ಸಂಘಟನೆಗಳು ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ವಿವಾದಾತ್ಮಕ ಟ್ವೀಟ್ ಮಾಡಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಕಾವೇರಿ ಕೊಳ್ಳದ ರೈತರ ಹೊಲಗಳಿಗೆ ಈಗಾಗಲೇ ನೀರು ಬಿಡುಗಡೆ ಮಾಡಲಾಗಿದೆ. ಆದರೂ ಬಂದ್ ನಡೆಸುತ್ತಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ನೀರು ಬಿಟ್ಟಿದ್ದರಿಂದ ರೈತರು ಜಮೀನುಗಳಲ್ಲಿದ್ದಾರೆ, ಹಾಗಿದ್ದ ಮೇಲೆ ಈ ಬಂದ್ ಯಾಕೆ? ಎಂದು ಪ್ರತಿಭಟನೆಯಲ್ಲಿ ಭಾಗವಹಿಸದ ರಮ್ಯಾ ಟ್ವೀಟ್ ಮೂಲಕ ಪ್ರಶ್ನಿಸುವ ಮೂಲಕ ಮತ್ತೆ ಪ್ರತಿಭಟನಾಕಾರರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮಂಡ್ಯ ಜಿಲ್ಲೆಗೆ ನಾಲೆಗಳಿಂದ ನೀರು ಹರಿದು ಹೋಗುತ್ತಿರುವ ಹಾಗೂ ಗದ್ದೆಗಳಲ್ಲಿ ರೈತರು ಕೆಲಸ ಮಾಡುತ್ತಿರುವ ಫೋಟೋಗಳನ್ನು ಹಾಕಿ ರಮ್ಯಾ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.