ಬೆಂಕಿಯ ಜ್ವಾಲೆಗೆ ಸುಟ್ಟ ಲಾರಿ 
ಪ್ರಧಾನ ಸುದ್ದಿ

ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ; ಸೆ.14ರವರಗೆ ನಿಷೇಧಾಜ್ಞೆ

ಸುಪ್ರೀಂಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಪ್ರಕ್ಷುಬ್ಧಗೊಂಡಿರುವ...

ಬೆಂಗಳೂರು: ಸುಪ್ರೀಂಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ್ದರಿಂದ ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದೀಗ ನಿಷೇಧಾಜ್ಞೆಯನ್ನು ಸೆಪ್ಟೆಂಬರ್ 14ರವರೆಗೂ ವಿಸ್ತರಿಸಲಾಗಿದೆ.

ಅಲ್ಲದೆ, ನಗರದ ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗಡಿ ರಸ್ತೆ, ರಾಜಾಜಿನಗರ, ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಮೀ ಲೇಔಟ್, ಪೀಣ್ಯ, ಆರ್.ಎಂ.ಸಿ.ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪಿಎಸ್ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಅಪಾರ ಸಂಖ್ಯೆಯಲ್ಲಿ ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚುತ್ತಿರುವುದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಬೆಂಗಳೂರು ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು ಸೆಪ್ಟೆಂಬರ್ 14ರವರೆಗೂ ನಿಷೇಧಾಜ್ಞೆಯನ್ನು ಜಾರಿಗೆ ಆದೇಶವನ್ನು ಹೊರಡಿಸಿದ್ದಾರೆ.
ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿರುವುದಲ್ಲದೆ, ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ನ ಮಧ್ಯಂತರ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬೆಂಗಳೂರಿನಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡು ಬಸ್ ಗಳು ನಿಲ್ಲುವ ಮೈಸೂರು ರಸ್ತೆಯ ಸ್ಯಾಟೆಲೈಟ್ ಬಸ್ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ಅಡಿಯಾರ್ ಆನಂದ ಭವನ್ ಹೊಟೆಲ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಸ್ ನಿಲ್ದಾಣದ ಹಿಂದೆ ಇರುವ ಟಿಂಬರ್ ಯಾರ್ಡ್ ನಲ್ಲಿ ನಿಂತಿದ್ದ ತಮಿಳುನಾಡಿಗೆ ಸೇರಿದ 25 ಲಾರಿಗಳಿಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದು, ಲಾರಿಗಳು ಸಂಪೂರ್ಣ ಭಸ್ಮವಾಗಿವೆ. ಇದಲ್ಲದೆ ನಾಯಂಡಹಳ್ಳಿಯಲ್ಲಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.
ಇನ್ನು ತಮಿಳರೇ ಹೆಚ್ಚಾಗಿ ಇರುವ ಓಕಳಿಪುರಂ, ಶ್ರೀರಾಂಪುರ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣದ ಆವರಣದಲ್ಲಿಯೂ ಪರಿಸ್ಥಿತಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸುವ ಕುರಿತು ಮಾಹಿತಿಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!