ಚಂಡೀಗಢ: ಆವಾಜ್-ಎ-ಪಂಜಾಬ್ ಪಂಜಾಬ್ ಪಕ್ಷವನ್ನು ಸ್ಥಾಪನೆಯಾದ ಕೆಲವೇ ದಿನಗಳಲ್ಲಿ ಪಕ್ಷದ ಸ್ಥಾಪಕ ಮಾಜಿ ರಾಜ್ಯಸಭಾ ಸದಸ್ಯ ನವಜೋತ್ ಸಿಂಗ್ ಸಿಧು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ನವಜೋತ್ ಸಿಂಗ್ ಸಿಧು ಅವರೊಂದಿಗೆ ಅವರ ಪತ್ನಿ ಸಹ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ವರದಿಗಳು ಪ್ರಕಟವಾಗಿದೆ. ಪಂಜಾಬ್ ನ್ನು ನಾಶ ಮಾಡಿರುವ ನಾಯಕರ ವಿರುದ್ಧ ಹೋರಾಡುವುದಾಗಿ ಹೇಳಿದ್ದ ನವಜೋತ್ ಸಿಂಗ್ ಸಿಧು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆಲವೇ ದಿನಗಳಲ್ಲಿ ಆವಾಜ್-ಎ- ಪಂಜಾಬ್ ಪಕ್ಷವನ್ನು ಸ್ಥಾಪಿಸಿದ್ದರು. ಸೆ.2 ರಂದು ಪಕ್ಷವನ್ನು ಅಧಿಕೃತವಾಗಿ ಪ್ರಕಟಿಸಿ ಮಾತನಾಡಿದ್ದ ನವಜೋತ್ ಸಿಂಗ್ ಸಿಧು, ಪಂಜಾಬ್ ವಿಧಾನಸಭಾ ಚುನಾವಣೆಗೆ ಆವಾಜ್-ಎ-ಪಂಜಾಬ್ 117 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.