ಕಾಶ್ಮೀರ ಗಲಭೆಯ ಒಂದು ದೃಶ್ಯ 
ಪ್ರಧಾನ ಸುದ್ದಿ

ಕಾಶ್ಮೀರ ಪ್ರತ್ಯೇಕವಾದಿ ಸಂಘಟನೆಗಳಿಗೆ ಹಣ ಹರಿಕೆ ನಿಲ್ಲಿಸಲು ಅರ್ಜಿ: ಸುಪ್ರೀಂ ಕೋರ್ಟ್ ವಜಾ

ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ಸಂಘಟನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಣ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ತಡೆಯಲು ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ಸಂಘಟನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಣ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ತಡೆಯಲು ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೋರ್ಟ್ ಗಳು ಇಂತಹ ವಿಷಯಗಳಿಂದ ದೂರ ಉಳಿಯುವುದು ಸರಿ ಎಂದು ತಿಳಿಸಿದೆ. 
ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದು ತಿಳಿಸಿರುವ ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ಉದಯ್ ಉಮೇಶ್ ಲಲಿತ್ ಇವರಗಳನ್ನು ಒಳಗೊಂಡ ಪೀಠ "ಭದ್ರತೆ ಮತ್ತು ಇತರ ಕಾರಣಗಳಿಗೆ ಅನುದಾನ ನೀಡುವ ವಿಷಯ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದು" ಎಂದು ತಿಳಿಸಿದೆ. 
ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎತ್ತಿರುವ ವಿಷಯ "ನ್ಯಾಯಾಂಗ ನಿರ್ವಹಣೆಯ ವಿಷಯವಲ್ಲ" ಎಂದಿರುವ ನ್ಯಾಯಾಧೀಶ ಮಿಶ್ರ "ಇಂತಹ ವಿಷಯಗಳಲ್ಲಿ ನ್ಯಾಯಾಧೀಶರ ಪಾತ್ರ ಅತ್ಯಲ್ಪ" ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT