ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾವೇರಿ ವಿವಾದ: ತಮಿಳುನಾಡು ಬಂದ್ ಗೆ ಕಾಂಗ್ರೆಸ್ ಬೆಂಬಲ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರೈತರು ಮತ್ತು ವ್ಯಾಪಾರಿಗಳು ಕರೆ ನೀಡಿರುವ ರಾಜ್ಯ ಬಂದ್...

ಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರೈತರು ಮತ್ತು ವ್ಯಾಪಾರಿಗಳು ಕರೆ ನೀಡಿರುವ ರಾಜ್ಯ ಬಂದ್ ಗೆ ತಮಿಳುನಾಡು ಕಾಂಗ್ರೆಸ್ ಘಟಕ ಹಾಗೂ ತರಕಾರಿ, ಹಾಲು ವ್ಯಾಪಾರಿಗಳು ಬೆಂಬಲ ನೀಡಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸು ತಿರುನಾವುಕ್ಕರಸರ್ ಅವರು ರಾಜ್ಯ ಬಂದ್ ಗೆ ಪಕ್ಷದ ಬೆಂಬಲ ಘೋಷಿಸಿದ್ದು, ನಾಳಿನ ಬಂದ್ ನಲ್ಲಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಅಲ್ಲದೆ ತಮಿಳುನಾಡು ಬಂದ್ ಅನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇನ್ನು  ರಾಜ್ಯಾದ್ಯಂತ ತರಕಾರಿ ವ್ಯಾಪಾರಿಗಳು ಹಾಗೂ ಹಾಲು ಮಾರಾಟಗಾರರು ಸಹ ನಾಳೆ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕದಲ್ಲಿಸ ತಮಿಳರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸುತ್ತಿರುವುದನ್ನು ವಿರೋಧಿಸಿ ಹಾಗೂ ಕಾವೇರಿ ವಿವಾದಕ್ಕೆ ಶಾಸ್ವತ ಪರಿಹಾರಕ್ಕೆ ಒತ್ತಾಯಿಸಿ ರೈತಪರ ಸಂಘಟನೆಗಳು ಹಾಗೂ ವ್ಯಾಪಾರಿಗಳು ನಾಳೆ ತಮಿಳುನಾಡು ಬಂದ್ ಗೆ ಕರೆ ನೀಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT