ಆಧಾರ್ ಗುರುತಿನ ಚೀಟಿಗಳು 
ಪ್ರಧಾನ ಸುದ್ದಿ

ಆಧಾರ್ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದನ್ನು ನಿಷೇಧಿಸಿದ ಕೇಂದ್ರ

ಯಾವುದೇ ವ್ಯಕ್ತಿಯ ಆಧಾರ್ ಕಾರ್ಡ್ ಮಾಹಿತಿ ಹೊಂದಿರುವ ಏಜೆನ್ಸಿಗಳು, ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ-ಪ್ರಕಟಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.

ನವದೆಹಲಿ: ಯಾವುದೇ ವ್ಯಕ್ತಿಯ ಆಧಾರ್ ಕಾರ್ಡ್ ಮಾಹಿತಿ ಹೊಂದಿರುವ ಏಜೆನ್ಸಿಗಳು, ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ-ಪ್ರಕಟಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. 
ಆಧಾರ್ ನೀತಿಯಡಿ, ಯಾವುದೇ ನಿವಾಸಿಯ 12 ಅಂಕಿಗಳ ಆಧಾರ್ ಗುರುತಿನ ಸಂಖ್ಯೆಯ ಗೌಪ್ಯತೆಯನ್ನು ಯಾವುದೇ ಸಮಯದಲ್ಲಿ ಕಾಪಾಡಬೇಕಿದೆ. 
ಈ ನೀತಿಯ ನಿಯಮಗಳ ಪ್ರಕಾರ, ಯಾವುದೇ ಏಜೆನ್ಸಿ ಸಂಗ್ರಹಿಸಿರುವ ಬಯೋಮೆಟ್ರಿಕ್ ಮಾಹಿತಿಯನ್ನು ಬೇರೆ ಯಾರೊಂದಿಗೂ, ಯಾವ ಸನ್ನಿವೇಶದಲ್ಲಿಯೂ ಹಂಚಿಕೊಳ್ಳುವಂತಿಲ್ಲ. ಇದನ್ನು ಉಲ್ಲಂಘಿಸಿದವರಿಗೆ ಶಿಕ್ಷೆ ನೀಡಲಾಗುತ್ತದೆ. 
ಹಾಗೆಯೇ ಆಧಾರ್ ಸಂಖ್ಯೆ ಪಡೆಯುವ ಏಜೆನ್ಸಿಗಳು, ಗುರುತಿಗಾಗಿ ಆಧಾರ್ ಮಾಹಿತಿಯನ್ನು ನೀಡುವುದು ಕಡ್ಡಾಯವೋ ಅಥವಾ ಆಯ್ಕೆಯ ವಿಷಯವೋ ಎಂಬುದನ್ನು ಕೂಡ ಜನರಿಗೆ ತಿಳಿಸಬೇಕಿದೆ. 
ಹಾಗೆಯೇ ಆಧಾರ್ ಸಂಖ್ಯೆಯ ಮಾಹಿತಿಯನ್ನು ಪಡೆಯುವುದಕ್ಕೆ, ಸಂಗ್ರಹಿಸಿಕೊಳ್ಳುವುದಕ್ಕೆ ಮತ್ತು ಯಾವುದಾದರೂ ವಿಷಯದ ಸಲುವಾಗಿ ಬಳಸುವುದಕ್ಕೆ ಆ ಆಧಾರ್ ಸಂಖ್ಯೆ ಹೊಂದಿರುವ ವ್ಯಕ್ತಿಯ ಒಪ್ಪಿಗೆ ಪಡೆಯಬೇಕೆಂದು ನಿರ್ಬಂಧ ಹೇರಲಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!