ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಾವೇರಿ ಸಂಕಷ್ಟ ಪರಿಹಾರಕ್ಕಾಗಿ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,...

ಸಿದ್ದರಾಮಯ್ಯ
Lingaraj Badiger
Updated On : 19 Sept 2016, 4:28 am
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಕಷ್ಟ ಪರಿಹಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಮರಾಜೇಶ್ವರ ದೇವರ ಮೊರೆ ಹೋಗಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಇಂದು ಐದನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿರು ಸಿಎಂ, ಕಾವೇರಿ ನೀರಿನ ಸಮಸ್ಯೆ ಪರಿಹರಿಸುವಂತೆ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲಿಸಿದರು.
ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಉತ್ತಮ ಮಳೆ, ಬೆಳೆಯಾಗಿ ಕಾವೇರಿ ನೀರಿನ ಸಮಸ್ಯೆ ಪರಿಹಾರವಾಗಲಿ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿರುವುದಾಗಿ ತಿಳಿಸಿದರು. ಬಳಿಕ ಚಾಮರಾಜೇಶ್ವರ ದೇವಾಲಯದ ಮುಂಭಾಗದ ಉದ್ಯಾನದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು,

Advertisement

Advertisement

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಯನ್ನು ಮೆಟ್ಟಿ ನಿಂತ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಐದೇ ತಿಂಗಳಲ್ಲಿ ಚಾಮರಾಜನಗರಕ್ಕೆ ಮೊದಲ ಭೇಟಿ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement