ಸರ್ವಪಕ್ಷ ಸಭೆಯಲ್ಲಿ ದೇವೇಗೌಡ, ಸಿದ್ದರಾಮಯ್ಯ
ಬೆಂಗಳೂರು: ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎನ್ನುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬುಧವಾರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಬಿಜೆಪಿ ನಾಯಕರು ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎನ್ನುವುದು ಬೇಜವಾಬ್ದಾರಿ ಹೇಳಿಕೆಯಾಗುತ್ತದೆ. ಅಲ್ಲದೆ ಅವರು ಸರ್ವಪಕ್ಷ ಸಭೆ ಬಹಿಷ್ಕರಿಸಿದ್ದು ಸರಿಯಲ್ಲ. ಇಂತಹ ಕಷ್ಟದ ಸಂದರ್ಭದಲ್ಲಿ ಐಕ್ಯತೆಯಿಂದ ಇರಬೇಕಾಗುತ್ತದೆ ಎಂದರು.
ಪ್ರಧಾನಿ ಮಧ್ಯಸ್ಥಿಕೆಗೆ ನಾನು ಸಚಿವರ ಮನೆಗೆ ಬಾಗಿಲಿಗೂ ಹೋಗಲು ಸಿದ್ಧ ಎಂದ ದೇವೇಗೌಡರು, ನೀರು ಬಿಡದಂತೆಯೂ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ.
ಇನ್ನು ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಒಂದು ಹನಿ ನೀರು ಬಿಡಬಾರದು ಎಂಬುದು ನಮ್ಮ ನಿಲುವಾಗಿದ್ದು, ಅದನ್ನು ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದೇವೆ. ಈ ಸಂಬಂಧ ತುರ್ತು ಅಧಿವೇಶನ ಕರೆಯುವಂತೆಯೂ ಸರ್ಕಾರ ಸಲಹೆ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ದೇವೇಗೌಡರು ಸಹ ಸರ್ಕಾರಕ್ಕೆ ಸಾಕಷ್ಟು ಸಲಹೆ ನೀಡಿದ್ದಾರೆ ಎಂದರು.
ಸರ್ವಪಕ್ಷ ಸಭೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ ಸೇರಿದಂತೆ ಕಾಂಗ್ರೆಸ್ ಸಂಸದರು, ಶಾಸಕರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕರು ಪಾಲ್ಗೊಂಡಿದ್ದರು. ಆದರೆ ಬಿಜೆಪಿ ಸಂಸದರು, ಶಾಸಕರು ಸರ್ವಪಕ್ಷ ಸಭೆಗೆ ನಿರೀಕ್ಷೆಯಂತೆಯೇ ಗೈರು ಹಾಜರಾಗಿದ್ದರು.
ಸಂಪುಟ ಸಭೆಯ ನಂತರ ಅಂತಿಮ ನಿರ್ಧಾರ: ಸಿಎಂ
ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದೇನೆ. ಸರ್ವಪಕ್ಷ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಮಲ್ಲಿಕಾರ್ಜುನ್ ಖರ್ಗೆ ಹಾಗೂ ವೀರಪ್ಪ ಮೊಯ್ಲಿ ಅವರು ನೀಡಿದ ಎಲ್ಲಾ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics