ಪಣಜಿ: ಕಾವೇರಿ ನೀರಿನ ಹಂಚಿಕೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮತ್ತು ತಮಿಳುನಾಡು ಸ್ವಲ್ಪ ಪ್ರಮಾಣದ ನೀರಿನ ಅಗತ್ಯತೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.
ಬರಗಾಲವಿದ್ದ ವರ್ಷದಲ್ಲಿ ಎರಡೂ ರಾಜ್ಯಗಳು ಪ್ರತಿ ರಾಜ್ಯಕ್ಕೂ ಸಿಗಬೇಕಾದ ನೀರಿನ ಪ್ರಮಾಣದ ಅಗತ್ಯತೆಯನ್ನು ಕಡಿಮೆ ಮಾಡಿಕೊಳ್ಳಬೇಕಾಗಿದ್ದು, ಆ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ದುರದೃಷ್ಟಕರ ಅಂದರೆ ಜಲಾಶಯಗಳ ವಸ್ತು ಸ್ಥಿತಿಯನ್ನು ತಿಳಿಯದೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಾಧೀಶರು ಸುಪ್ರೀಂ ಕೋರ್ಟ್ ಸ್ಥಾಪಿಸಿದ ಕಾವೇರಿ ಮೇಲುಸ್ತುವಾರಿ ಸಮಿತಿಯ ನಿರ್ಧಾರವನ್ನೂ ಕಡೆಗಣಿಸಿದ್ದಾರೆ ಎಂದರು.
ಇದೇ ವೇಳೆ ಕರ್ನಾಟಕ ಸರ್ಕಾರ ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ ಮಾಡಲಾಗುವುದು ಎಂದು ವಿಶೇಷ ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿರುವುದು ಸುಪ್ರೀಂ ಕೋರ್ಟ್ ನಿರ್ಧಾರವನ್ನು ಪ್ರಶ್ನಿಸಲಿದೆ ಎಂದು ಹೇಳಿದ್ದಾರೆ.