ಬೀದರ್: ತಮಿಳುನಾಡಿಗೆ ಕಾವೇರಿ ನೀರು ಬಿಡು ಅಂದಾಕ್ಷಣ ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು ಈ ಸಂಬಂಧ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸಾಯೇಗಾಂವ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ರಾಷ್ಟ್ರೀಯ ಜಲನೀತಿ ಪ್ರಕಾರ ಕುಡಿಯುವ ನೀರಿಗೆ ಮೊದಲ ಆದ್ಯತೆ ಇದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡು ಅಂದಾಕ್ಷಣ ನಾವು ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಆದೇಶದ ಸಂಪೂರ್ಣ ಮಾಹಿತಿ ಇಲ್ಲ. ನಮ್ಮ ವಕೀಲರಿಂದ ಮಾಹಿತಿ ಪಡೆದು ನಂತರ ಯೋಚಿಸಲಾಗುವುದು ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಮೂರು ದಿನಗಳಲ್ಲಿ 18 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಆದೇಶ ಹೊರಬರುತ್ತಿದ್ದಂತೆ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.