ಚೆನ್ನೈ: ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲು ನಿರಾಕರಿಸುತ್ತಿರುವ ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ಕನಿಷ್ಠ ಒಂದು ಸಾಂಬಾ ಬೆಳೆಗಾದರೂ ತಕ್ಷಣ ನೀರು ಬಿಡುವಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಸುಪ್ರೀಂ ಕೋರ್ಟ್ ಆದೇಶದಂತೆ ಈ ಕೂಡಲೇ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬೇಕು ಎಂದು ಸಹ ಜಯಲಲಿತಾ ಆಗ್ರಹಿಸಿದ್ದಾರೆ.
ಇಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತ ನೇತೃತ್ವದಲ್ಲಿ ನಡೆದ ಕಾವೇರಿ ಸಂಧಾನ ಸಭೆಯಲ್ಲಿ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರಾಮ್ ಮೋಹನ್ ರಾವ್ ಅವರು ಜಯಲಲಿತಾ ಅವರ ಭಾಷಣವನ್ನು ಓದಿದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಜಯಾ ತಿಳಿಸಿದ್ದಾರೆ.
ಕರ್ನಾಟಕ ಈ ಹಿಂದೆಯೂ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿಲ್ಲ. ಈಗಲೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics