ಚೆನ್ನೈ: ತಮಿಳುನಾಡು ಹಂಗಾಮಿ ರಾಜ್ಯಪಾಲ ಸಿ,ಎಚ್, ವಿದ್ಯಾಸಾಗರ್ ರಾವ್ ಅವರು ಶನಿವಾರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಭೇಟಿ ಮಾಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಸುಮಾರು 35 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿದ್ದ ವಿದ್ಯಾಸಾಗರ್ ರಾವ್ ಅವರು ಜಯಲಲಿತಾ ಅವರ ಆರೋಗ್ಯದ ಬಗ್ಗೆ ಹಾಗೂ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವಿವರಣೆ ಪಡೆದಿದ್ದಾರೆ. ಈ ವೇಳೆ ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಹಾಗೂ ಹಿರಿಯ ಸಚಿವರು ಸಹ ಉಪಸ್ಥಿತರಿದ್ದರು.
ರಾಜ್ಯಪಾಲರು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಎಐಎಡಿಎಂಕೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರಿಂದ ಆಸ್ಪತ್ರೆ ಸುತ್ತ ಭಾರಿ ಭದ್ರತೆ ಏರ್ಪಡಿಸಲಾಗಿತ್ತು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಎಐಎಡಿಎಂ ವಕ್ತಾರ ಪಿ.ಎಸ್.ರಾಮಚಂದ್ರನ್ ಅವರು, ಡಾ.ರಿಚರ್ಡ್ ಬೀಲೆ ಅವರು ಮುಖ್ಯಮಂತ್ರಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು. ಜಯಲಲಿತಾ ಅವರ ಫೋಟೋ ಬಿಡುಗಡೆ ಮಾಡುತ್ತೀರಾ ಎಂಬ ವರದಿಗಾರರ ಪ್ರಶ್ನೆ ಪ್ರತಿಕ್ರಿಯಿಸಿದ ರಾಮಚಂದ್ರನ್, ಅದರ ಅಗತ್ಯ ಇಲ್ಲ ಎಂದರು.
ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics