ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕಾವೇರಿ ಹೋರಾಟಕ್ಕೆ ಧುಮುಕಿದ ಮಾಜಿ ಪ್ರಧಾನಿ; ವಿಧಾನಸೌಧದ ಆವರಣದಲ್ಲಿ ಉಪವಾಸ ಧರಣಿ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾವಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಭಟನೆಗೆ ಇಳಿದಿದ್ದು, ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾವಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಭಟನೆಗೆ ಇಳಿದಿದ್ದು, ವಿಧಾನಸೌಧದ  ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ನಿನ್ನೆ ರಾತ್ರಿಯೇ ತಮ್ಮ ಪುತ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಅವರೊಂದಿಗೆ ದೇವೇಗೌಡ ಅವರು ಚರ್ಚಿಸಿದ್ದು, ಕಾವೇರಿ ಹೋರಾಟದಲ್ಲಿ ಕರ್ನಾಟಕದ ಕಾನೂನಾತ್ಮಕ ನಡೆ  ಕುರಿತಂತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಇಂದು  ಬೆಳಗ್ಗೆ 6.30ಕ್ಕೆ ಗಾಂಧಿ ಬಜಾರ್ ಬಳಿಯಿರುವ ಕಾರಂಜಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ದೇವೇಗೌಡ ಅವರು, ನಂತರ ಕೋಟೆ ವೆಂಕಟರಮಣ ದೇವಾಲಯಕ್ಕೆ ಪೂಜೆ ಸಲ್ಲಿಸಿ ವಿಧಾನಸೌಧದ ಬಳಿಯಿರುವ ಅಂಬೇಡ್ಕರ್ ಪ್ರತಿಮೆಗೆ ಮಾಡಿದರು.

ಇದೀಗ ಗಾಂಧಿ ಪ್ರತಿಮೆ ಬಳಿ ಕುಳಿತಿರುವ ದೇವೇಗೌಡ ಅವರು ಧರಣಿ ನಡೆಸುತ್ತಿದ್ದಾರೆ. ಅವರಿಗೆ ಪರಿಷತ್ ಸದಸ್ಯ ಟಿಎ ಷರವಣ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಸಾಥ್  ನೀಡಿದ್ದಾರೆ.

ಈ ವೇಳೆ ಮಾತನಾಡಿದ ದೇವೇಗೌಡ ಅವರು, ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ಕಾವೇರಿ ವಿಚಾರವಾಗಿ ಈ ಹಿಂದೆ ಘೋಷಣೆಯಾದ ಐ ತೀರ್ಪನ್ನು  ವಿರೋಧಿಸಿ ಈಗಾಗಲೇ ಕರ್ನಾಟಕ ಸರ್ಕಾರ ಸಿಎಲ್ ಪಿ ಸಲ್ಲಿಸಿದೆ. ಐ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ತೀರ್ಪು ಮರುಪರಿಶೀಲಿಸುವಂತೆ ಕೋರಿಕೆ ಸಲ್ಲಿಸಲಾಗಿದೆ. ಸುಪ್ರೀಂ  ಕೋರ್ಟ್ ಕೂಡ ರಾಜ್ಯ ಸರ್ಕಾರದ ಮನವಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಈ ಹಿಂದೆ ಹೇಳಿತ್ತು. ಇದೇ ಅಕ್ಟೋಬರ್ 18ಕ್ಕೆ ಸಿಎಲ್ ಪಿ ವಿಚಾರಣೆಗೆ ಬರಲಿದೆ. ಇನ್ನು 2013ರಲ್ಲಿ ಕಾವೇರಿ  ನಿರ್ವಹಣಾ ಮಂಡಳಿ ರಚನೆಗೆ ನಿರ್ಧರಿಸಲಾಗಿತ್ತು. ಹೀಗಿದ್ದೂ ತಮಿಳುನಾಡು ಸಿಎಂ ಜಯಲಲಿತಾ ಅವರು ಪದೇ ಪದೇ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಅವರ ಈ ನಡೆಯ ಹಿಂದಿನ ಉದ್ದೇಶವೇನೋ ತಿಳಿಯುತ್ತಿಲ್ಲ ಎಂದು ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಅಂತೆಯೇ ಮೊದಲು ಕರ್ನಾಟಕದ ಕಾವೇರಿ ಕೊಳ್ಳದ ಸುಮಾರು 2.3 ಕೋಟಿ ಜನರಿಗೆ ಕುಡಿಯಲು ನೀರು ಕೊಡಿ. ಬಳಿಕ ತಮಿಳುನಾಡು ರೈತರ ಸಾಂಬಾ ಬೆಳೆಗೆ ನೀರು ಬಿಡಿ ಎಂದು  ದೇವೇಗೌಡ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!