ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ. ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚೆನ್ನವೀರ ಕಣವಿ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು. ದಸರಾ ಮಹೋತ್ಸವ ಚಾಲನೆ ಕಾರ್ಯಕ್ರಮದಲ್ಲಿ ಹೆಚ್.ಸಿ ಮಹದೇವಪ್ಪ, ಪ್ರತಾಪ್ ಸಿಂಹ, ಕ್ರೀಡಾಪಟು ದೀಪಾ, ಅಶ್ವಿನಿ ಪೊನ್ನಪ್ಪ ಸೇರಿದಂತೆ ಗಣ್ಯರು ಭಾಗಿಯಾಗಿದ್ದಾರೆ.