ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಶಾಂತಿ ಸ್ಥಾಪನೆಗಾಗಿ ಇಂಡೋ-ಪಾಕ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಬಾನ್ ಕಿ ಮೂನ್

ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಿ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಹೇಳಿದ್ದಾರೆ.

ವಿಶ್ವಸಂಸ್ಥೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಿ  ಉಭಯ ದೇಶಗಳ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಭಾರತ ಗಡಿಯಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ವಿಶ್ವಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಗಡಿಯಲ್ಲಿನ ಇತ್ತೀಚಿನ ಬೆಳವಣಿಗೆಗಳು  ಸಮಾಧಾನಕರವಾಗಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪಿಒಕೆಯಲ್ಲಿ ಉಗ್ರ ಚಟುವಟಿಕೆ ಹಾಗೂ ಪದೇ ಪದೇ ಉಭಯ ರಾಷ್ಟ್ರಗಳ ಸೈನಿಕರ ನಡುವಿನ ಗುಂಡಿನ ಚಕಮಕಿ ಸೌಹಾರ್ಧತೆಯನ್ನು  ಹಾಳುಮಾಡುತ್ತದೆ ಎಂದು ಅಭಿಪ್ರಾಯಪಟ್ಟಿರುವ ಬಾನ್ ಕಿ ಮೂನ್ ಅವರು, ಉಭಯ ರಾಷ್ಟ್ರಗಳು ಬಯಸಿದರೆ ಶಾಂತಿ ಸ್ಥಾಪನೆಗಾಗಿ ಮಧ್ಯಸ್ಥಿಕೆ ವಹಿಸಲು ತಾವು ಸಿದ್ಧ ಎಂದು ಹೇಳಿದ್ದಾರೆ.

"ಎರಡೂ ಭಾಗದಲ್ಲಿ ಶಾಂತಿ ಸ್ಥಾಪನೆಗಾಗಿ ಸಾಕಷ್ಟು ಕಾರ್ಯಗಳು ನಡೆಯಬೇಕಿದ್ದು, ಕೇವಲ ಮಾತುಕತೆ ಮುಖಾಂತರವೇ ಇದನ್ನು ಬಗಹರಿಸಿಕೊಳ್ಳಬೇಕು. ಪಾಕಿಸ್ತಾನ ಮತ್ತು ಭಾರತ  ಸರ್ಕಾರಗಳೆರಡೂ ಒಪ್ಪಿದರೆ ಕಾಶ್ಮೀರ ವಿವಾದ ಸೇರಿದಂತೆ ಉಭಯ ದೇಶಗಳ ನಡುವಿನ ಸಮಸ್ಯೆಗಳ ಕುರಿತು ಶಾಂತಿಯುತವಾಗಿ ಚರ್ಚಿಸಲು ವೇದಿಕೆ ಒದಗಿಸಿಕೊಡಲು ವಿಶ್ವಸಂಸ್ಥೆ  ಸಿದ್ಧವಾಗಿದೆ ಎಂದು ಬಾನ್ ಕಿ ಮೂನ್ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ 18ರಂದು ನಡೆದ ಉರಿ ಉಗ್ರ ದಾಳಿ ಬಳಿಕ ಕೆಂಡಾಮಂಡಲವಾಗಿದ್ದ ಭಾರತ ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 7 ಉಗ್ರ ಕ್ಯಾಂಪ್  ಗಳನ್ನು ನೆಲಸಮಗೊಳಿಸಿ 38 ಉಗ್ರರನ್ನು ಕೊಂದು ಹಾಕಿತ್ತು. ಈ ಘಟನೆ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ವಾತಾವರಣೆ ನಿರ್ಮಾಣವಾಗಿತ್ತು. ಪಾಕ್ ಸರ್ಕಾರ ಹಾಗೂ ಪಾಕಿಸ್ತಾನ  ಸೇನೆ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುವ ಮಾತುಗಳನ್ನಾಡುವ ಮೂಲಕ ನೇರವಾಗಿಯೇ ಭಯೋತ್ಪಾದಕರಿಗೆ ಬೆಂಬಲ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!