ಅಲಹಾಬಾದ್ ಹೈಕೋರ್ಟ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ವ್ಯವಸ್ಥೆಯ "ತೀರ್ಥಕ್ಷೇತ್ರ": ಪ್ರಧಾನಿ ಮೋದಿ

ಅಲಹಾಬಾದ್ ಹೈ ಕೋರ್ಟ್ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ತೀರ್ಥ ಕ್ಷೇತ್ರ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಅಲಹಾಬಾದ್: ಅಲಹಾಬಾದ್ ಹೈ ಕೋರ್ಟ್ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ತೀರ್ಥ ಕ್ಷೇತ್ರ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್  ಹೈಕೋರ್ಟ್ ನ 150ನೇ ವರ್ಷಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, 150 ವರ್ಷಗಳನ್ನು ಪೂರೈಸಿರುವ ಅಲಹಾಬಾದ್  ಹೈಕೋರ್ಟ್ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ತೀರ್ಥಕ್ಷೇತ್ರವಿದ್ದಂತೆ. ನ್ಯಾಯ ವಿತರಣೆ ದೇಶದ ಪ್ರತೀಯೊಬ್ಬ ನಾಗರೀಕನಿಗೂ ಸಮಾನವಾಗಿರಬೇಕು ಎಂದು ಹೇಳಿದರು. ಇದೇ ವೇಳೆ ಡಾ.ರಾಧಾಕೃಷ್ಣನ್ ಅವರ ಮಾತನ್ನು  ಉಲ್ಲೇಖಿಸಿದ ಪ್ರಧಾನಿ ಮೋದಿ ನ್ಯಾಯದಾನ ಕೇವಲ ಶ್ರೀಮಂತರ ಪಾಲಲ್ಲ. ಅದು ದೇಶದ ಪ್ರತೀಯೊಬ್ಬ ನಾಗರಿಕನ ಹಕ್ಕು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಮಹತ್ವದ್ದು,  ಪ್ರಮುಖವಾಗಿ ಸ್ವತಂತ್ರ  ಹೋರಾಟದಲ್ಲಿ ಅಲಹಾಬಾದ್ ಐತಿಹಾಸಿಕ ಪಾತ್ರ ನಿರ್ವಹಿಸಿದೆ ಎಂದು ಹೇಳಿದರು.

ಇದೇ ವೇಳೆ ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ತಂತ್ರಜ್ಞಾನದಿಂದಾಗಿ ಇಂದು ಎಲ್ಲ ಕ್ಷೇತ್ರಗಳ ಕೆಲಸಗಳೂ ಸುಲಭವಾಗುತ್ತಿವೆ. ಅಂತೆಯೇ ಇಂದು ನ್ಯಾಯಾಂಗ ವ್ಯವಸ್ಥೆಯಲ್ಲೂ  ತಂತ್ರಜ್ಞಾನ ಪ್ರಮುಖ ಪಾತ್ರವಹಿಸಿದ್ದು, ಪ್ರಮುಖ ಪ್ರಕರಣಗಳಲ್ಲಿ ಕೈದಿಗಳು ನ್ಯಾಯಾಲಯಕ್ಕ ಹಾಜರಾಗಲು ಸಾಧ್ಯವಾಗದೇ ಇದ್ದಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ಕೈದಿಯ ವಿಚಾರಣೆ ನಡೆಸಲಾಗುತ್ತದೆ. ಅಂತೆಯೇ ವಿನೂತನ  ಸ್ಟಾರ್ಟ್ ಅಪ್ ಗಳು ಮತ್ತು ಆ್ಯಪ್ ಗಳು ಹೊಸ ಸೇವೆಗಳನ್ನು ಕಲ್ಪಿಸುತ್ತಿವೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.

ಅಂತೆಯೇ ತನ್ನ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಸುಮಾರು 1200ಕ್ಕೂಹೆಚ್ಚು ಬಳಕೆಯಲ್ಲಿಲ್ಲದ ಕಾನೂನುಗಳನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದರು. ಅಂತೆಯೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್  ಖೆಹರ್ ಅವರ ನ್ಯಾಯಮೂರ್ತಿಗಳ ಕೊರತೆ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಈ ಬಗ್ಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದ್ದು, ನ್ಯಾಯಮೂರ್ತಿಗಳ ನೇಮಕಕ್ಕೆ ಬೇಕಾದ ಎಲ್ಲ ಕ್ರಮಗಳನ್ನೂ  ತೆಗೆದುಕೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕೇಂದ್ರ ಕಾನೂನು ಸಚಿವ ರವಿಶಂಕರ್  ಪ್ರಸಾದ್, ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!