ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಇವಿಎಂ ದುರ್ಬಳಕೆ ಸಾಬೀತುಪಡಿಸಿ: ಕೇಜ್ರಿವಾಲ್ ಗೆ ಚುನಾವಣಾ ಆಯೋಗ ಬಹಿರಂಗ ಸವಾಲು

ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲಾಗುತ್ತಿದೆ ಎಂಬ ಆರೋಪಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ....

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲಾಗುತ್ತಿದೆ ಎಂಬ ಆರೋಪಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದ್ದು, ಇವಿಎಂ ಯಂತ್ರಗಳನ್ನು ತಿರುಚಲು ಸಾಧ್ಯ ಎಂಬುದಾದರೆ ಅದನ್ನು ಸಾಬೀತುಪಡಿಸುವಂತೆ ರಾಜಕೀಯ ನಾಯಕರಿಗೆ ಬಹಿರಂಗ ಸವಾಲು ಹಾಕಿದೆ.
ಇವಿಎಂಗಳನ್ನು ತಿರುಚಲು ಸಾಧ್ಯವಿದೆ ಎಂಬುದನ್ನು ಸಾಬೀತು ಮಾಡಲು ತಮಗೆ 72 ತಾಸು ಸಮಯ ಕೊಟ್ಟರೆ ಸಾಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ  ಕೇಜ್ರಿವಾಲ್ ಅವರು ಆಯೋಗಕ್ಕೆ ಸವಾಲೆಸೆದಿದ್ದರು. ಈ ಸವಾಲನ್ನು ಸ್ವೀಕರಿಸಿರುವ ಚುನಾವಣಾ ಆಯೋಗ, ಮತಯಂತ್ರಗಳನ್ನು ದುರ್ಬಳಕೆ ಮಾಡಲು ಸಾಧ್ಯವಿಲ್ಲ. ದುರ್ಬಳಕೆ ಸಾಧ್ಯ ಎಂಬುದಾದರೆ ಅದನ್ನು ಸಾಬೀತು ಪಡಿಸಿ. 2009ರಲ್ಲಿ ಇದೇ ರೀತಿ ನಮಗೆ ಸವಾಲು  ಹಾಕಲಾಗಿತ್ತು. ಆದರೆ ಯಾರೊಬ್ಬರೂ ಮತಯಂತ್ರ ತಿರುಚಲು ಸಾಧ್ಯ ಎಂಬುದನ್ನು ಸಾಬೀತು ಪಡಿಸಿಲ್ಲ ಎಂದು ಆಯೋಗ ಹೇಳಿದೆ.
ಇವಿಎಂ ತಿರುಚಲು ಸಾಧ್ಯ ಎಂಬುದನ್ನು ಸಾಬೀತು ಮಾಡಲು ನಾವು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ತಂತ್ರಜ್ಞರನ್ನು ಹಾಗೂ ವಿಜ್ಞಾನಿಗಳು ಸೇರಿದಂತೆ ವಿದ್ಯುನ್ಮಾನ ಮತಯಂತ್ರದ ಪ್ರಾಮಾಣಿಕತೆ ಪ್ರಶ್ನಿಸಿದ ಪ್ರತಿಯೊಬ್ಬರಿಗೂ ಆಹ್ವಾನಿಸುತ್ತಿದ್ದೇವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಿಕೊಳ್ಳಲಾಗಿದೆ ಮತ್ತು ಈ ಯಂತ್ರವನ್ನು ದುರ್ಬಳಕೆ ಮಾಡಲು ಸಾಧ್ಯ ಎಂಬುದು ಇಡೀ ವಿಶ್ವಕ್ಕೆ ಗೊತ್ತು ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಅಲ್ಲದೆ ಈ ತಿಂಗಳು ನಡೆಯಲಿರುವ ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!