ಹೈದರಾಬಾದ್: ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಸ್ಲಿಂ ಮೀಸಲಾತಿಯನ್ನು 4ರಿಂದ 12ಕ್ಕೆ ಹೆಚ್ಚಿಸುವ ಹಾಗೂ ಎಸ್ಪಿ ಮೀಸಲಾತಿಯನ್ನು 6ರಿಂದ 10ಕ್ಕೆ ಹೆಚ್ಚಿಸುವ ಕರಡು ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
ಈ ಸಂಬಂಧ ಭಾನುವಾರ ವಿಶೇಷ ಅಧಿವೇಶನ ಕರೆಯಲಾಗಿದ್ದು, ಈ ವೇಳೆ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಒದಗಿಸುವ ಮಸೂದೆಯನ್ನು ಮಂಡಿಸಿ, ಅಂಗೀಕರಿಸುವುದಾಗಿ ಕೆ.ಚಂದ್ರಶೇಖರ್ ರಾವ್ ಅವರು ತಿಳಿಸಿದ್ದಾರೆ. ಅಲ್ಲದೆ ಈ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇನ್ನು ಮುಸ್ಲಿಂ ಮೀಸಲಾತಿಯನ್ನು ರಾಜ್ಯ ಬಿಜೆಪಿ ಸೇರಿದಂತೆ ಕೇಂದ್ರ ಸಚಿವರಾದ ಎಂ.ವೆಂಕಯ್ಯ ನಾಯ್ಡು ಹಾಗೂ ಬಂಡಾರು ದದ್ತಾತ್ರೇಯ ಅವರು ತೀವ್ರವಾಗಿ ವಿರೋಸಿದ್ದಾರೆ.
ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ವಿಧಾನಸಭೆ ಚುನಾವಣೆ ವೇಳೆ ಮುಸ್ಲಿಂ ಮೀಸಲಾತಿಯನ್ನು ಶೇ.12ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿದ್ದು. ಈಗ ಟಿಆರ್ಎಸ್ ಸರ್ಕಾರ ತನ್ನ ಚುನಾವಣಾ ಭರವಸೆಯನ್ನು ಈಡೇರಿಸಲು ಮುಂದಾಗಿದೆ.