ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಹಾರದಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನಿಗೆ ಗುಂಡೇಟು; ಗಂಭೀರ ಗಾಯ

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ. 
ಸಿವಾನ್ ನ ಜಿರ್ಧೆಯಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಟೋಲಾ ನಿಲ್ದಾಣದ ಬಳಿ ಮಂಗಳವಾರ ತಡ ರಾತ್ರಿ ಗುರುತು ಪತ್ತೆ ಹಚ್ಚಲಾಗದ ದುಷ್ಕರ್ಮಿಗಳು ಹಿಂದೂ ಯುವ ವಾಹಿನಿ ಸಂಘಟನೆಯ ಸಕ್ರಿಯ ಕಾರ್ಯಕರ್ತ ೨೨ ವರ್ಷದ ವಿಶಾಲ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದಾರೆ. 
ಸಿಂಗ್ ಅವರನ್ನು ಮೊದಲಿಗೆ ಪ್ರಾದೇಶಿಕ ಆಸ್ಪತ್ರೆಗೆ ಸೇರಿಸಲಾಗಿತ್ತು ನಂತರ ಉತ್ತರಪ್ರದೇಶದ ಗೋರಕ್ ಪುರದಲ್ಲಿರುವ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಈ ಗುಂಡಿನ ದಾಳಿಯಿಂದ ಕುಪಿತಗೊಂಡ ಪ್ರಾದೇಶಿಕ ಜನ, ರಸ್ತೆ ತಡೆ ನಡೆಸಿ ಅಪರಾಧಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. 
ಇದು ಬಿಹಾರದಲ್ಲಿ ಹಿಂದೂ ಯುವ ವಾಹಿನಿಯ ಕಾರ್ಯಕರ್ತರ ಮೇಲೆ ನಡೆದಿರುವ ದಾಳಿಯ ಮೊದಲ ಪ್ರಕರಣವಾಗಿದೆ. 
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಸ್ಥಾಪನೆ ಮಾಡಿದ್ದ ಹಿಂದೂ ಯುವ ವಾಹಿನಿ ಈಗ ಬಿಹಾರದಲ್ಲಿ ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳಲು ಹೆಚ್ಚೆಚ್ಚು ಯುವಕರನ್ನು ನೊಂದಾಯಿಸಿಕೊಳ್ಳುತ್ತಿದೆ. 
ಬಿಹಾರದ ಗಡಿಯಲ್ಲಿರುವ ಪೂರ್ವ ಉತ್ತರ ಪ್ರದೇಶದಲ್ಲಿ ಈ ಸಂಘಟನೆ ದೊಡ್ಡ ಮಟ್ಟದಲ್ಲಿ ಬೆಳೆದಿದ್ದು, ಗೋರಕ್ಷಣೆ ಇದರ ಮುಖ್ಯ ಗುರಿಗಳಲ್ಲಿ ಒಂದು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ