ಟಿಟಿವಿ ದಿನಕರನ್ 
ಪ್ರಧಾನ ಸುದ್ದಿ

ಚುನಾವಣಾ ಅಧಿಕಾರಿಗಳಿಗೆ ಲಂಚ: ದೆಹಲಿ ಪೊಲೀಸರಿಂದ ದಿನಕರನ್ ವಿಚಾರಣೆ

ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿನ್ಹೆಗಾಗಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ಮಿಸಿದ ಆರೋಪ...

ನವದೆಹಲಿ: ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿನ್ಹೆಗಾಗಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ಮಿಸಿದ ಆರೋಪ ಎದುರಿಸುತ್ತಿರುವ, ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರನ್ನು ಶನಿವಾರ ದೆಹಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಸಂಬಂಧಿ ದಿನಕರನ್ ಅವರನ್ನು ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ತಂಡ ಇಂದು ತೀವ್ರ ವಿಚಾರಣೆಗೆ ಒಳಪಡಿಸಿದೆ.
ವಿಚಾರಣೆ ವೇಳೆ ಹಣ ವರ್ಗಾವಣೆ ಬಗ್ಗೆ, ಸುಕೇಶ್ ಚಂದ್ರಶೇಖರೊಂದಿಗಿನ ಸಂಬಂಧದ ಬಗ್ಗೆ ಹಾಗೂ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ ಬಗ್ಗೆ ದೆಹಲಿ ಕ್ರೈ ಬ್ರ್ಯಾಂಚ್ ಪೊಲೀಸರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಇಂದು ವಿಚಾರಣೆಗೆ ಹಾಜರಾಗುವಂತೆ ದಿನಕರನ್ ಅವರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಿನಕರನ್ ದೆಹಲಿಗೆ ಆಗಮಿಸಿದ್ದಾರೆ.
ಇನ್ನು  ಚುನಾವಣಾ ಅಧಿಕಾರಿಗೆ ಲಂಚ ನೀಡಿದ ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿರುವ ದೆಹಲಿ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಮಧ್ಯವರ್ತಿ ಸುಖೇಶ್ ಚಂದ್ರಶೇಖರ್ ನನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಅತನ  ಸಹಚರರಿಗಾಗಿಯೂ ಬಲೆ ಬೀಸಿದ್ದಾರೆ.
ಏಪ್ರಿಲ್ 16ರಂದು ದೆಹಲಿಯ ವಿವಿಧೆಡೆ ದಾಳಿ ಮಾಡಿದ್ದ ಅಧಿಕಾರಿಗಳು ದಕ್ಷಿಣ ದೆಹಲಿಯ ಖಾಸಗಿ ಹೊಟೆಲ್ ನ ರೂಂ ಒಂದರಲ್ಲಿ ಮಧ್ಯವರ್ತಿ ಸುಖೇಶ್ ಚಂದ್ರಶೇಖರ್ ನನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ ಆತನಿಂದ 2000  ರು.ನೋಟಿನ ಕಂತೆಗಳಿರುವ ಬ್ಯಾಗ್ ಅನ್ನು ಕೂಡ ವಶಪಡಿಸಿಕೊಂಡಿದ್ದರು. ಚಾಂದಿನಿ ಚೌಕ್ ನಲ್ಲಿರುವ ಹವಾಲಾ ದಂಧೆಕೋರರಿಂದ ಸುಖೇಶ್ ಈ ಹಣ ಪಡೆದಿದ್ದಾಗೆ ಹೇಳಿಕೆ ನೀಡಿದ್ದ.  ಈ ಹಣವನ್ನು ಟಿಟಿವಿ ದಿನಕರನ್ ಅವರೇ  ಹವಾಲಾ ದಂಧೆ ಮೂಲಕ ರವಾನಿಸಿದ್ದರು ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!