ಪ್ರಧಾನ ಸುದ್ದಿ

ತಮಿಳುನಾಡಿಗೆ ಪೂರ್ಣಾವಧಿ ರಾಜ್ಯಪಾಲರ ನೇಮಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Lingaraj Badiger
ಚೆನ್ನೈ: ತಮಿಳುನಾಡಿಗೆ ಪೂರ್ಣಾವಧಿ ರಾಜ್ಯಪಾಲರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಶನಿವಾರ ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತ ವಿ ಅನ್ಬಾಝಗನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಇಂಧಿರಾ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಎಂ ಸುಂದರ್ ಅವರನ್ನೊಳಗೊಂಡ ಪೀಠ ಇಂದು ವಜಾಗೊಳಿಸಿದ್ದು, ಎರಡು ರಾಜ್ಯಗಳಿಗೆ ಒಬ್ಬ ವ್ಯಕ್ತಿಯನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ ಎಂದು ಹೇಳಿದೆ.
ಭಾರತ ಸಂವಿಧಾನದ 153ನೇ ವಿಧಿಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಏಕಕಾಲಕ್ಕೆ ಎರಡು ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಕ ಮಾಡಬಹುದು ಎಂದು ಕೋರ್ಟ್ ಹೇಳಿದೆ. ಅಲ್ಲದೆ ಈ ವಿಚಾರದಲ್ಲಿ ಕೋರ್ಟ್ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.
ಮಹಾರಾಷ್ಟ್ರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ಅವರಿಗೆ ಹೆಚ್ಚುವರಿಯಾಗಿ ತಮಿಳುನಾಡು ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದ್ದು, ಇದರಿಂದ ಪರಿಣಾಮಕಾರಿ ಆಡಳಿತ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.
SCROLL FOR NEXT