ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ತಮಿಳುನಾಡು ನೂತನ ಸಿಎಂ ಆಗಿ ಶಶಿಕಲಾ ಆಯ್ಕೆ, ಪನ್ನೀರ್ ಸೆಲ್ವಂ ರಾಜಿನಾಮೆ

ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪರಮಾಪ್ತೆ ಶಶಿಕಲಾ ನಟರಾಜನ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ...

ವಿಕೆ ಶಶಿಕಲಾ
Vishwanath S
Updated On : 5 Feb 2017, 5:12 am

ಚೆನ್ನೈ: ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪರಮಾಪ್ತೆ ಶಶಿಕಲಾ ನಟರಾಜನ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಚೆನ್ನೈನ ರಾಯಪೇಟೆಯಲ್ಲಿರುವ ಎಐಎಡಿಎಂಕೆ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಶಶಿಕಲಾ ನಟರಾಜನ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.

ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ನಟರಾಜನ್ ಅವರು ಫೆಬ್ರವರಿ 8 ಅಥವಾ 9ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಅಣ್ಣಾಡಿಎಂಕೆಯಿಂದ ಹಾಲಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಓ. ಪನ್ನೀರ್ ಸೆಲ್ವಂ ಅವರು ರಾಜಿನಾಮೆ ನೀಡಿದ್ದು, ತಮ್ಮ ರಾಜಿನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement