ನವದೆಹಲಿ: ತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೈಸರ್ಗಿಕ ಚಿಕಿತ್ಸೆಗಾಗಿ ಮತ್ತೆ ಬೆಂಗಳೂರಿಗೆ ಬರುತ್ತಿದ್ದಾರೆ.
ಪಂಜಾಬ್ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಕೇಜ್ರಿವಾಲ್ ಅವರು ನಿನ್ನೆ ದೆಹಲಿಗೆ ವಾಪಸ್ ಆಗಿದ್ದು, ಫೆಬ್ರವರಿ 7 ರಂದು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
ಪಂಜಾಬ್ ಮತ್ತು ಗೋವಾ ವಿಧಾನ ಸಭಾ ಚುನಾವಣೆಯ ಮತದಾನ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬರುತ್ತಿದ್ದಾರೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ತೀವ್ರವಾಗಿ ಏರಿಕೆಯಾಗಿದೆ, ದಿನಕ್ಕೆ 3 ಸಲ ಇನ್ಸ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಆದರೂ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿಲ್ಲ. ಜತೆಗೆ ಜ್ವರದಿಂದಲೂ ಸಹ ಅವರು ಬಳುತ್ತಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ನೈಸರ್ಗಿಕ ಚಿಕಿತ್ಸೆ ಪಡೆಯಲಿದ್ದಾರೆ. ಸುಮಾರು 12 ರಿಂದ 14 ದಿನ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಕಳೆದ ವರ್ಷ ಜನವರಿಯಲ್ಲಿ ಕೆಮ್ಮು ಮತ್ತು ಮಧುಮೇಹ ಸಮಸ್ಯೆಯ ಪರಿಹಾರಕ್ಕಾಗಿ ಕೇಜ್ರಿವಾಲ್ ಬೆಂಗಳೂರಿನಲ್ಲಿ 12 ದಿನಗಳ ನೈಸರ್ಗಿಕ ಚಿಕಿತ್ಸೆ ಪಡೆದಿದ್ದರು. ಜತೆಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಟಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics