ಎಂ.ಕೆ.ಸ್ಟಾಲಿನ್, 
ಪ್ರಧಾನ ಸುದ್ದಿ

ಜಯಾ ಮನೆ ಕೆಲಸದಾಕೆ ಸಿಎಂ ಆಗಲಿ ಅಂತ ತಮಿಳು ಜನತೆ ಮತ ನೀಡಿಲ್ಲ: ಸ್ಟಾಲಿನ್

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಮನೆ ಕೆಲಸ ಮಾಡುವ ಯಾರಿಗಾದ್ರೂ ಈ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಿ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಮನೆ ಕೆಲಸ ಮಾಡುವ ಯಾರಿಗಾದ್ರೂ ಈ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಿ ಅಂತ ತಮಿಳು ಜನತೆ ಮತ ನೀಡಿಲ್ಲ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರ ಆಪ್ತೆ ಶಶಿಕಲಾ ನಟಜರಾಜನ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಟಾಲಿನ್ ಅವರು, ಜಯಲಲಿತಾ ನಿಧನದ ನಂತರ ಆಡಳಿತಾರೂಢ ಎಐಎಡಿಎಂಕೆ  ಪಕ್ಷದಲ್ಲಿ ನಡೆಯುತ್ತಿರುವ ಬದಲಾವಣೆಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ಈಗಿರುವ ಸರ್ಕಾರವು ಜನಾದೇಶದಿಂದ ರೂಪಗೊಂಡದ್ದು ಅಲ್ಲ ಎಂದು ಆರೋಪಿಸಿದ್ದಾರೆ.
ತಮಿಳು ಜನತೆ ಕಳೆದ ಮೇ, 2016ರಲ್ಲಿ  ನಡೆದ ವಿಧಾಸಭೆ ಚುನಾವಣೆಯಲ್ಲಿ ಜಯಲಲಿತಾ ನೇತೃತ್ವದ ಸರ್ಕಾರಕ್ಕೆ ಮತನೀಡಿದ್ದರೇ ಹೊರತು ಪನ್ನೀರ್ ಸೆಲ್ವಂ ಅವರಿಗಾಗಲೀ, ಜಯಲಲಿತಾ ಅವರ ಮನೆ ಕೆಲಸದಾಕೆಗಾಗಲೀ ಅಲ್ಲ ಎಂದು ಸ್ಟಾಲಿನ್ ಪರೋಕ್ಷವಾಗಿ ನಿಯೋಜಿತ ಮುಖ್ಯಮಂತ್ರಿ ಶಶಿಕಲಾ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿನಲ್ಲಿ ಜವಾಬ್ದಾರಿಯುತ ಪಕ್ಷವಾಗಿರುವ ಡಿಎಂಕೆ ಈ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ತುಂಬಾ ಹತ್ತಿರದಿಂದ ಗಮನಿಸುತ್ತಿದೆ. ನಾವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರೂ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!