ಬೆಂಬಲಿಗರೊಂದಿಗೆ ಪನ್ನೀರ್ ಸೆಲ್ವಂ 
ಪ್ರಧಾನ ಸುದ್ದಿ

ಮೊದಲು ಪನ್ನೀರ್ ಸೆಲ್ವಂ ಭೇಟಿಗೆ ರಾಜ್ಯಪಾಲರ ಅವಕಾಶ, ನಂತರ ಶಶಿಕಲಾ ಭೇಟಿ

ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ತಮಿಳುನಾಡು ಉಸ್ತುವಾರಿ ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್....

ಚೆನ್ನೈ: ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ತಮಿಳುನಾಡು ಉಸ್ತುವಾರಿ ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್ ಅವರು ಗುರುವಾರ ಮಧ್ಯಾಹ್ನ ಚೆನ್ನೈಗೆ ಆಗಮಿಸಿದ್ದು, ಮೊದಲು ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರ ಭೇಟಿಗೆ ಅವಕಾಶ ನೀಡಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರ ಭೇಟಿ ಅವಕಾಶ ನೀಡಿದ್ದಾರೆ.
ಈಗಾಗಲೇ ರಾಜಭವನಕ್ಕೆ ಆಗಮಿಸಿರುವ ವಿದ್ಯಾಸಾಗರ್ ಅವರು, ಸಂಜೆ 5 ಗಂಟೆಗೆ ಪನ್ನೀರ್ ಸೆಲ್ವಂ ಭೇಟಿಗೆ ಹಾಗೂ ಸಂಜೆ 7.30ಕ್ಕೆ ಶಶಿಕಲಾ ನಟರಾಜನ್ ಅವರ ಭೇಟಿಗೆ ಅವಕಾಶ ನೀಡಿದ್ದಾರೆ.
ಪನ್ನೀರ್ ಸೆಲ್ವಂ ಅವರು ಈಗಾಗಲೇ ರಾಜ್ಯಪಾಲರ ಭೇಟಿಗಾಗಿ ರಾಜಭನಕ್ಕೆ ತೆರಳಿದ್ದು, ಅವರಿಗೆ ಪಕ್ಷದ ಹಿರಿಯ ನಾಯಕ ಇ ಮಧುಸೂದನನ್ ಅವರು ಸಾಥ್ ನೀಡಿದ್ದಾರೆ. ಇಂದು ಬೆಳಗ್ಗೆಯಷ್ಟೇ ಮಧುಸೂದನನ್ ಅವರು ಚೆನ್ನೈನ ಗ್ರೀನ್ ವೇಸ್ ನಲ್ಲಿರುವ ಓ ಪನ್ನೀರ್ ಸೆಲ್ವಂ ಅವರ ನಿವಾಸಕ್ಕೆ ಭೇಟಿ ನೀಡಿ, ಬೆಂಬಲ ಘೋಷಿಸಿದ್ದರು.
ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಧುಸೂದನನ್ ಅವರು, ಪಕ್ಷವನ್ನು ಗೂಂಡಾಗಳಿಂದ ರಕ್ಷಿಸಬೇಕಿದೆ. ಶಶಿಕಲಾ ಅವರು ತಾವು ರಾಜಕೀಯಕ್ಕೆ ಬರುವುದಿಲ್ಲ ಎಂದು ಜಯಲಲಿತಾ ಅವರಿಗೆ ಮಾತು ಕೊಟ್ಟಿದ್ದಾರೆ. ಆದರೆ ಅವರ ನಿಧನದ ನಂತರ ಅಧಿಕಾರಕ್ಕಾಗಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಜಯಲಲಿತಾ ಅವರಿಗೆ ದ್ರೋಹ ಮಾಡಿರುವ ಶಶಿಕಲಾ ಅವರು ಈ ರಾಜ್ಯದ ಮುಖ್ಯಮಂತ್ರಿಯಾದರೆ ಅದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಧುಸೂದನನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!