ಆರ್ ವಿ ದೇಶಪಾಂಡೆ 
ಪ್ರಧಾನ ಸುದ್ದಿ

ಏರೋ ಇಂಡಿಯಾ: ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ರಾಜ್ಯದ ಸಾಮರ್ಥ್ಯ ಪ್ರದರ್ಶನ

ಏರೋ ಇಂಡಿಯಾ 2017ರಲ್ಲಿ ಕರ್ನಾಟಕ ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ತನ್ನ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶಿಸಲಿದೆ....

ಬೆಂಗಳೂರು: ಏರೋ ಇಂಡಿಯಾ 2017ರಲ್ಲಿ ಕರ್ನಾಟಕ ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ತನ್ನ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶಿಸಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಎರಡು ದಿನಗಳ "ಮೇಕ್‌ ಇನ್‌ ಇಂಡಿಯಾ-ಕರ್ನಾಟಕ' ಸಮ್ಮೇಳನ ಆಯೋಜಿಸಿದೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗಿರುವ ಅವಕಾಶ, ಕರ್ನಾಟಕದ ಕೈಗಾರಿಕೆ ಬೆಳವಣಿಗೆ, ಉತ್ಪಾದನಾ ವಲಯದ ಸಾಧನೆ, ಕೌಶಲ್ಯತೆ ಅನಾವರಣಗೊಳಿಸುವ ಉದ್ದೇಶದದಿಂದ ಫೆ.13 ಮತ್ತು 14 ರಂದು ನಗರದಲ್ಲಿ "ಮೇಕ್‌ ಇನ್‌ ಇಂಡಿಯಾ-ಕರ್ನಾಟಕ' ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಾಣ ಮತ್ತು ರಾಜ್ಯದಲ್ಲಿ ತಯಾರಿಕಾ ಕ್ಷೇತ್ರದ ಸ್ವಾಯತ್ತತೆಯ ವೃದ್ಧಿ, ಮುಂದಿನ ಭವಿಷ್ಯದ ದೃಷ್ಟಿಯಿಂದ ಯುವಕರಿಗೆ ಉದ್ಯೋಗಗಳಲ್ಲಿ ಕೌಶಲ್ಯ ತರಬೇತಿ ನೀಡುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಹೇಳಿದರು.
ಮೇಕ್‌ ಇನ್‌ ಇಂಡಿಯಾ ಸಮ್ಮೇಳನಕ್ಕೆ ಫೆ.13ರಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಚಾಲನೆ ನೀಡಲಿದ್ದು, ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು, ಸುರೇಶ್‌ ಪ್ರಭು, ಅನಂತಕುಮಾರ್‌, ಸ್ಮತಿ ಇರಾನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಫೆ.14ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಮನೋಹರ್‌ ಪರಿಕ್ಕರ್‌ ಮತ್ತು ಎಂ.ಜೆ.ಅಕºರ್‌ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. 
ಈ ಸಮ್ಮೇಳನದಲ್ಲಿ ಸುಮಾರು 4,000 ಪ್ರತಿನಿಧಿಗಳು ಭಾಗಿಯಾಗುತ್ತಿದ್ದು, ಮೇಕ್‌ ಇನ್‌ ಇಂಡಿಯಾ ವಿಷಯ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ. ಏರೋಸ್ಪೇಸ್‌ ಮತ್ತು ಡಿಫೆನ್ಸ್‌, ಬಯೋಟೆಕ್ನಾಲಜಿ ಮತ್ತು ಫಾರಸೂಟಿಕಲ್ಸ್‌, ಎಲೆಕ್ಟ್ರಾನಿಕ್ಸ್‌ ಮತ್ತು ಎಲೆಕ್ಟ್ರಿಕಲ್ಸ್‌, ಪ್ಲಾಸ್ಟಿಕ್ಸ್‌ ಮತ್ತು ಕೆಮಿಕಲ್ಸ್‌ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆಗಳು ಜರುಗಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ